No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
  • Advertise With Us
  • Grievances
  • About Us
  • Contact Us
Tuesday, November 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜಸ್ಥಾನ : ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ: 2 ಸಾವು, ಮನೆಗಳ ಮೇಲೂ ಬಿದ್ದ ದೇಹದ ತುಂಡುಗಳು!

kalpa News by kalpa News
November 5, 2026
in ರಾಷ್ಟ್ರೀಯ
0
Rajasthan Firecracker Warehouse Blast 2 Killed copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನಾಗೌರ್(ರಾಜಸ್ಥಾನ)  | 

ರಾಜಸ್ಥಾನದಲ್ಲಿ (Rajasthan) ಭೀಕರ ಸ್ಫೋಟವೊಂದು ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಾಗೌರ್ ಜಿಲ್ಲೆಯ ಬದ್ಲಿ ಗ್ರಾಮದಲ್ಲಿ ಗುರುವಾರ ಪಟಾಕಿ (Firecracker Blast) ಹಾಗೂ ಸಿಡಿಮದ್ದು ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಈ ಭೀಕರ ಅವಘಡ ಸಂಭವಿಸಿದೆ. ಸ್ಫೋಟದ (Blast) ತೀವ್ರತೆಗೆ ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದ್ದು, ಮೃತರ ದೇಹದ ಅವಶೇಷಗಳು ಸಮೀಪದ ಮನೆಗಳ ಮೇಲೂ ಬಿದ್ದಿವೆ.

ಮಾಹಿತಿಯ ಪ್ರಕಾರ, ನಾಗೌರ್ ಪೊಲೀಸ್ ಠಾಣೆ ವ್ಯಾಪ್ತಿಯ ಬದ್ಲಿ ಗ್ರಾಮದಲ್ಲಿರುವ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ ಸಂದರ್ಭದಲ್ಲಿ ಮೂವರು ವ್ಯಕ್ತಿಗಳು ಇದ್ದರು. ಏಕಾಏಕಿ ಸಂಭವಿಸಿದ ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ನಾಗೌರ್‌ನ ಜವಾಹರಲಾಲ್ ನೆಹರು (ಜೆಎಲ್‌ಎನ್) ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದೆ.

ಹಲವು ಕಿಲೋಮೀಟರ್ ದೂರದವರೆಗೂ ಕೇಳಿಸಿದ ಸ್ಫೋಟದ ಸದ್ದು

ಗೋದಾಮಿನಲ್ಲಿ ಸಂಭವಿಸಿದ ಸ್ಫೋಟ ಎಷ್ಟು ಭೀಕರವಾಗಿತ್ತೆಂದರೆ ಹಲವು ಕಿಲೋಮೀಟರ್ ದೂರದವರೆಗೂ ಅದರ ಸದ್ದು ಕೇಳಿಸಿದೆ. ಸ್ಫೋಟದ ಪರಿಣಾಮ ಗೋದಾಮಿನಲ್ಲಿದ್ದವರ ದೇಹಗಳು ಛಿದ್ರಗೊಂಡಿದ್ದು, ದೇಹದ ಕೆಲವು ಅವಶೇಷಗಳು ಸಮೀಪದ ಮನೆಗಳ ಮೇಲೆ ಬಿದ್ದಿವೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಅವಶೇಷಗಳನ್ನು ಸಂಗ್ರಹಿಸಿ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ.PES Shivamogga

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ 108 ಆಂಬುಲೆನ್ಸ್ ಸೇವೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಫೋಟದ ತೀವ್ರತೆಗೆ ಗೋದಾಮಿನ ಸುತ್ತಮುತ್ತಲಿನ ಹಲವು ಮನೆಗಳಿಗೂ ಹಾನಿಯಾಗಿರುವುದಾಗಿ ವರದಿಯಾಗಿದೆ.

Rajasthan : ಗನ್‌ಪೌಡರ್‌ಗೆ ಬೆಂಕಿ ತಗುಲಿ ಸ್ಫೋಟ?

ನಾಗೌರ್ ವೃತ್ತಾಧಿಕಾರಿ ಜತಿನ್ ಜೈನ್ ನೀಡಿರುವ ಮಾಹಿತಿ ಪ್ರಕಾರ, ಈ ಕಟ್ಟಡದಲ್ಲಿ ಬಹಳ ವರ್ಷಗಳಿಂದ ಗನ್‌ಪೌಡರ್ ಹಾಗೂ ಪಟಾಕಿಗಳನ್ನು ಸಂಗ್ರಹಿಸುವ ಗೋದಾಮು ಕಾರ್ಯನಿರ್ವಹಿಸುತ್ತಿತ್ತು. ಗನ್‌ಪೌಡರ್‌ಗೆ ಬೆಂಕಿ ತಗುಲಿದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

Also Read>> ಹುಬ್ಬಳ್ಳಿ–ವಟ್ವಾ ವಿಶೇಷ ರೈಲು; ಮಿಂಚನಾಳ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳ ನಿಲುಗಡೆ

ಇನ್ನು, ಗೋದಾಮು ಪರವಾನಗಿ ಪಡೆದು ಕಾರ್ಯನಿರ್ವಹಿಸುತ್ತಿತ್ತು. ಮಾಲೀಕರು ಅಗತ್ಯ ದಾಖಲೆಗಳನ್ನು ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದವರು ಹಲವು ವರ್ಷಗಳಿಂದ ಪಟಾಕಿ ಮತ್ತು ಸಿಡಿಮದ್ದು ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ.Christ King

ಮೃತರನ್ನು ಗುರುತಿಸಿದ ಪೊಲೀಸರು

ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಮೊಹಮ್ಮದ್ ಆಮಿರ್ ಮತ್ತು ಮುಜೀಬ್ ಎಂದು ಗುರುತಿಸಲಾಗಿದೆ. ಇಬ್ಬರೂ ಬೀಗ ಸಂಬಂಧಿಕರಾಗಿದ್ದು, ಅವರ ಸಾವಿನಿಂದ ಕುಟುಂಬಸ್ಥರಲ್ಲಿ ದುಃಖ ಮಡುಗಟ್ಟಿದೆ. ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಗೆ ನಾಗೌರ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ನಾಗೌರ್ ತಹಶೀಲ್ದಾರ್ ನರಸಿಂಗ್ ಟ್ಯಾಂಕ್ ಸೇರಿದಂತೆ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ತಹಶೀಲ್ದಾರ್ ನರಸಿಂಗ್ ಟ್ಯಾಂಕ್, ಘಟನಾ ಸ್ಥಳದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದ ನೆರವಿನಿಂದ ಅದನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ತರಲಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಇಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಘಟನೆಯ ಹಿಂದಿನ ನಿಖರ ಕಾರಣ ಹಾಗೂ ಇತರ ವಿವರಗಳು ತಿಳಿದುಬರಲಿವೆ ಎಂದು ಹೇಳಿದ್ದಾರೆ.

ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದು, ಸ್ಫೋಟಕ್ಕೆ ನಿಖರ ಕಾರಣವೇನು? ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಲಾಗಿತ್ತೇ? ಎಂಬ ಅಂಶಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalpa News Advertising Disclaimer

Tags: BlastFirecracker BlastRajasthanಪಟಾಕಿರಾಜಸ್ಥಾನಸಿಡಿಮದ್ದುಸ್ಫೋಟ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಬ್ಬಳ್ಳಿ–ವಟ್ವಾ ವಿಶೇಷ ರೈಲು; ಮಿಂಚನಾಳ ನಿಲ್ದಾಣದಲ್ಲಿ ಪ್ಯಾಸೆಂಜರ್ ರೈಲುಗಳ ನಿಲುಗಡೆ

Next Post

ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಮಿಂಚಿದ ಶರಾವತಿ ಕಾಲೇಜಿನ ವಿದ್ಯಾರ್ಥಿನಿಯರು

kalpa News

kalpa News

Next Post
PM Modi tweet Sharavati college Yakshagana students

ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಮಿಂಚಿದ ಶರಾವತಿ ಕಾಲೇಜಿನ ವಿದ್ಯಾರ್ಥಿನಿಯರು

No Result
View All Result
MEIL 700 Million Investment 1 Lakh Crore Valuation
English Articles

Global Investors Back MEIL Group in $700 Million Structured Investment; MEIL Valued at ₹1 lakh Crore

by kalpa News
November 20, 2026
0

Kalpa Media House  |  Hyderabad  |  Megha Engineering and Infrastructures Limited (MEIL) Group has raised approximately $700 million through an...

Read moreDetails
Pneumonia or Common Cold The Differece Before Its Too Late!

Why pneumonia should never be mistaken for a common cold

November 16, 2026
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL