ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದೀಪಾವಳಿ (Diwali Festival) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈಋತ್ಯ ರೈಲ್ವೆಯು ಯಶವಂತಪುರ–ಮಡಗಾಂವ್ ಹಾಗೂ ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ರೈಲುಗಳನ್ನು (Special Train) ಓಡಿಸಲು ನಿರ್ಧರಿಸಿದೆ. ಪ್ರತಿ ಮಾರ್ಗದಲ್ಲಿಯೂ ತಲಾ ಒಂದು ಟ್ರಿಪ್ ಸಂಚರಿಸಲಿದ್ದು, ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆ.
ನವೆಂಬರ್ 6ರಂದು ಯಶವಂತಪುರದಿಂದ ವಿಶೇಷ ರೈಲು
ರೈಲು ಸಂಖ್ಯೆ 06591 ಯಶವಂತಪುರ–ಮಡಗಾಂವ್ ವಿಶೇಷ ಎಕ್ಸ್ಪ್ರೆಸ್ 2026ರ ನವೆಂಬರ್ 6ರ ಶುಕ್ರವಾರ ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಡಲಿದೆ. ಮರುದಿನ ಅಂದರೆ ನವೆಂಬರ್ 7ರ ಶನಿವಾರ ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ.
ನವೆಂಬರ್ 8ರಂದು ಮಡಗಾಂವ್ನಿಂದ ಬೆಂಗಳೂರು ಕಂಟೋನ್ಮೆಂಟ್ಗೆ
ರೈಲು ಸಂಖ್ಯೆ 06592 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ನವೆಂಬರ್ 8ರ ಭಾನುವಾರ ಬೆಳಿಗ್ಗೆ 11 ಗಂಟೆಗೆ ಮಡಗಾಂವ್ನಿಂದ ಹೊರಡಲಿದೆ. ನವೆಂಬರ್ 9ರ ಸೋಮವಾರ ಬೆಳಿಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಕರಾವಳಿಯ ಹಲವು ನಿಲ್ದಾಣಗಳಲ್ಲಿ ನಿಲುಗಡೆ
ಈ ವಿಶೇಷ ರೈಲುಗಳು ಎರಡೂ ಮಾರ್ಗಗಳಲ್ಲಿ ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ. ಅವುಗಳೆಂದರೆ:
ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಮಂಗಳೂರು ಜಂಕ್ಷನ್, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕಣಕೋಣ.
ಮರು ಪ್ರಯಾಣದ ರೈಲು ಸಂಖ್ಯೆ 06592 ಯಶವಂತಪುರದಲ್ಲಿ ನಿಲುಗಡೆ ಹೊಂದಿರುವುದಿಲ್ಲ. ಬದಲಾಗಿ, ಎಸ್ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
Also Read>> ರೈಲ್ವೆ ಪಿಂಚಣಿದಾರರಿಗೆ ಗುಡ್ನ್ಯೂಸ್: ಮೈಸೂರು ವಿಭಾಗದ ಐದು ಕಡೆ ಜೀವನ್ ಪ್ರಮಾಣ್ ಶಿಬಿರ
19 ಬೋಗಿಗಳ ವಿಶೇಷ ರೈಲು
ಈ ವಿಶೇಷ ರೈಲಿನಲ್ಲಿ ಒಟ್ಟು 19 ಬೋಗಿಗಳು ಇರಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಎಸಿ, ಸ್ಲೀಪರ್ ಕ್ಲಾಸ್ ಹಾಗೂ ಜನರಲ್ ಕ್ಲಾಸ್ ಬೋಗಿಗಳ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಲಗೇಜ್-ಕಮ್-ಬ್ರೇಕ್ ವ್ಯಾನ್ ಮತ್ತು ದಿವ್ಯಾಂಗಚೇತನ ಪ್ರಯಾಣಿಕರಿಗಾಗಿ ಮೀಸಲಾದ ಬೋಗಿಯೂ ಇರಲಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆ ಕೈಗೊಂಡಿರುವ ಈ ವಿಶೇಷ ರೈಲು ವ್ಯವಸ್ಥೆಯಿಂದ ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವೆ ಸಂಚರಿಸುವವರಿಗೆ ಅನುಕೂಲವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










