No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Monday, November 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಏರ್ ಪೋರ್ಟ್’ಗೆ ಅನ್ಯಾಯ ಬೇಡ; ಬೆಂಗಳೂರು ವಿಮಾನವಾದ್ರೂ ಉಳಿಸಿ: ಎಂಪಿ ರಾಘವೇಂದ್ರ

kalpa News by kalpa News
November 9, 2026
in ಶಿವಮೊಗ್ಗ
0
Shivamogga Airport Bengaluru Flight Service BY Raghavendra Demand copy
Share on FacebookShare on TwitterShare on WhatsApp

ನವೆಂಬರ್ 21ರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ವಿಮಾನ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ; ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅಗತ್ಯ ಆರ್ಥಿಕ ನೆರವು ನೀಡುವಂತೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ಮಲೆನಾಡಿನ ಪ್ರಮುಖ ವಾಣಿಜ್ಯ ಮತ್ತು ಪ್ರವಾಸೋದ್ಯಮ ಕೇಂದ್ರವಾಗಿರುವ ಶಿವಮೊಗ್ಗಕ್ಕೆ ವಿಮಾನ ಸಂಪರ್ಕ ಕಡಿತಗೊಳ್ಳುವ ಪರಿಸ್ಥಿತಿ ಎದುರಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. (Shivamogga) ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕನಿಷ್ಠ ಶಿವಮೊಗ್ಗ–ಬೆಂಗಳೂರು (Bengaluru) ನಡುವೆ ಒಂದು ವಿಮಾನ ಸೇವೆಯನ್ನಾದರೂ ಮುಂದುವರಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಇಂಡಿಗೋ ಸಂಸ್ಥೆಯ ವಿಮಾನ ಸೇವೆ ಸ್ಥಗಿತಗೊಂಡಿದೆ. ಇದೀಗ ಉಡಾನ್ (UDAN) ಯೋಜನೆಯಡಿ ಕಾರ್ಯಾಚರಣೆ ನಡೆಸುತ್ತಿರುವ ವಿಮಾನಯಾನ ಸೇವೆಗಳಿಗೂ ನೀಡಲಾಗುತ್ತಿರುವ ಆರ್ಥಿಕ ನೆರವಿನ ಅವಧಿ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 21ರಿಂದ ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಒಂದು ವೇಳೆ ಈ ಬೆಳವಣಿಗೆ ಸಂಭವಿಸಿದರೆ ಶಿವಮೊಗ್ಗ ವಿಮಾನ ನಿಲ್ದಾಣದ ವಾಣಿಜ್ಯ ವಿಮಾನ ಸಂಪರ್ಕವೇ ಸಂಪೂರ್ಣವಾಗಿ ಕಡಿತಗೊಳ್ಳುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದರು.

₹583 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿಮಾನ ನಿಲ್ದಾಣ

2023ರ ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದರು. ಸುಮಾರು ₹583 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣ ಮಲೆನಾಡು ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂಬ ನಿರೀಕ್ಷೆ ಹೊಂದಲಾಗಿತ್ತು.ಶಿವಮೊಗ್ಗ ಮಾತ್ರವಲ್ಲದೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೂ ವಿಮಾನ ಪ್ರಯಾಣದ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ವಿಮಾನ ನಿಲ್ದಾಣ ನಿರ್ಮಿಸಲಾಗಿತ್ತು. ವ್ಯಾಪಾರ, ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ ಹಾಗೂ ವೈದ್ಯಕೀಯ ಸೇವೆಗಳಿಗಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ಪ್ರಯಾಣಿಸುವವರಿಗೆ ಇದು ಅನುಕೂಲಕರವಾಗಿತ್ತು.

Also Read>> ಕನ್ನಡವನ್ನು ಕಡ್ಡಾಯಗೊಳಿಸಿರುವ ಶ್ರೀ ಕೃಷ್ಣ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ

ಆದರೆ ಉದ್ಘಾಟನೆಯಾಗಿ ಕೆಲವೇ ವರ್ಷಗಳಲ್ಲಿ ವಿಮಾನ ಸೇವೆಗಳು ಒಂದೊಂದಾಗಿ ಸ್ಥಗಿತಗೊಳ್ಳುತ್ತಿರುವುದು ಬೇಸರದ ಸಂಗತಿ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಈವರೆಗೆ ಸುಮಾರು 4.29 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಇಷ್ಟೊಂದು ಸಂಖ್ಯೆಯಲ್ಲಿ ಪ್ರಯಾಣಿಕರು ವಿಮಾನ ಸೇವೆ ಬಳಸಿಕೊಂಡಿದ್ದರೂ, ಸೇವೆಗಳನ್ನು ನಿರಂತರವಾಗಿ ಮುಂದುವರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದು ಸರಿಯಲ್ಲ ಎಂದು ರಾಘವೇಂದ್ರ ಅಭಿಪ್ರಾಯಪಟ್ಟರು.

Shivamogga : ವಿಮಾನಯಾನ ಸಂಸ್ಥೆಗಳಿಗೆ ಆರ್ಥಿಕ ನೆರವು ಮುಂದುವರಿಸಲಿ

ಉಡಾನ್ ಯೋಜನೆಯಡಿ ವಿಮಾನಯಾನ ಸಂಸ್ಥೆಗಳಿಗೆ ನಿಗದಿತ ಅವಧಿಯವರೆಗೆ ಆರ್ಥಿಕ ನೆರವು ಹಾಗೂ ಪ್ರೋತ್ಸಾಹಧನ ನೀಡಲಾಗುತ್ತದೆ. ಮೂರು ವರ್ಷಗಳ ನಂತರ ಒಂದು ವರ್ಷದ ವಿರಾಮದ ವ್ಯವಸ್ಥೆಯಿದ್ದು, ಬಳಿಕದ ಹಂತದಲ್ಲಿ ಹೊಸ ಯೋಜನೆಯಡಿ ವಿಮಾನ ಸೇವೆಗಳಿಗೆ ಅವಕಾಶ ಕಲ್ಪಿಸುವ ಪ್ರಕ್ರಿಯೆ ನಡೆಯುತ್ತದೆ.

ಈ ವ್ಯವಸ್ಥೆಯ ಕಾರಣದಿಂದಾಗಿ ಶಿವಮೊಗ್ಗ ವಿಮಾನ ನಿಲ್ದಾಣದ ವಿಮಾನ ಸೇವೆಗಳು ಸ್ಥಗಿತಗೊಳ್ಳುವಂತಾಗಬಾರದು. ಹೊಸ ಯೋಜನೆಯಡಿ ಸೇವೆಗಳು ಆರಂಭವಾಗುವವರೆಗೆ ವಿಮಾನ ಸಂಪರ್ಕ ಕಡಿತಗೊಳ್ಳದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.Kirloskar Diwali Advt 2026ವಿಮಾನಯಾನ ಸಂಸ್ಥೆಗಳಿಗೆ ನೀಡಲಾಗುವ ಪ್ರೋತ್ಸಾಹಧನದ ಪ್ರಮಾಣವನ್ನು ಶೇ.7.5ರಿಂದ ಶೇ.5ಕ್ಕೆ ಇಳಿಸುವಂತೆ ಮನವಿ ಮಾಡಲಾಗಿದ್ದರೂ, ಈ ಕುರಿತು ಸೂಕ್ತ ಸ್ಪಂದನೆ ದೊರೆತಿಲ್ಲ. ಕಲಬುರಗಿ ಮತ್ತು ಬೀದರ್ ವಿಮಾನ ನಿಲ್ದಾಣಗಳ ಸೇವೆಗಳಿಗೆ ನೀಡುತ್ತಿರುವ ರೀತಿಯಲ್ಲಿಯೇ ಶಿವಮೊಗ್ಗದ ವಿಮಾನ ಸೇವೆಗಳಿಗೂ ಅಗತ್ಯ ಆರ್ಥಿಕ ನೆರವು ಒದಗಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಹೇಳಿದರು.

ಮೂರೂವರೆ ವರ್ಷಕ್ಕೆ ₹15 ಕೋಟಿ ನೆರವು ದೊಡ್ಡ ಹೊರೆಯಲ್ಲ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ವೇಳೆಯೂ ವಿಮಾನಗಳು ಇಳಿಯಲು ಅಗತ್ಯವಿರುವ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಪ್ರಯತ್ನಗಳು ನಡೆಯುತ್ತಿವೆ. ವಿಮಾನ ನಿಲ್ದಾಣದ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿರುವಾಗಲೇ ವಿಮಾನ ಸೇವೆಗಳು ಸ್ಥಗಿತಗೊಳ್ಳಲು ಅವಕಾಶ ನೀಡುವುದು ಸೂಕ್ತವಲ್ಲ ಎಂದರು.

ವಿಮಾನಯಾನ ಸಂಸ್ಥೆಗಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಸೇವೆಗಳನ್ನು ಮುಂದುವರಿಸಲು ಸರ್ಕಾರ ಮುಂದಾಗಬೇಕು. ಮುಂದಿನ ಮೂರೂವರೆ ವರ್ಷಗಳ ಅವಧಿಗೆ ಸುಮಾರು ₹15 ಕೋಟಿ ಹೆಚ್ಚುವರಿ ಆರ್ಥಿಕ ನೆರವು ನೀಡಿದರೆ ವಿಮಾನ ಸಂಪರ್ಕವನ್ನು ಉಳಿಸಿಕೊಳ್ಳಲು ಸಾಧ್ಯವಾಗಬಹುದು. ಈ ಮೊತ್ತ ಸರ್ಕಾರಕ್ಕೆ ದೊಡ್ಡ ಆರ್ಥಿಕ ಹೊರೆಯಾಗುವುದಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ವಿಮಾನಯಾನ ಸಂಸ್ಥೆಗಳಿಗೆ ಅಗತ್ಯ ಪ್ರೋತ್ಸಾಹಧನ ನೀಡುವ ಮೂಲಕ ಶಿವಮೊಗ್ಗದ ವಿಮಾನ ಸೇವೆಗಳನ್ನು ಉಳಿಸಬೇಕು ಎಂದು ಆಗ್ರಹಿಸಿದರು.PES Shivamogga

ಕನಿಷ್ಠ ಬೆಂಗಳೂರು ಮಾರ್ಗವನ್ನಾದರೂ ಉಳಿಸಿ

ಶಿವಮೊಗ್ಗದಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕನಿಷ್ಠ ಒಂದು ವಿಮಾನ ಸೇವೆಯನ್ನಾದರೂ ನಿರಂತರವಾಗಿ ಮುಂದುವರಿಸಬೇಕು ಎಂಬುದು ಸಂಸದರ ಪ್ರಮುಖ ಒತ್ತಾಯವಾಗಿದೆ.

ಮಲೆನಾಡಿನ ಜನರಿಗೆ ಬೆಂಗಳೂರು ಸಂಪರ್ಕ ಅತ್ಯಂತ ಮಹತ್ವದ್ದಾಗಿದೆ. ವ್ಯಾಪಾರ-ವಹಿವಾಟು, ಕೈಗಾರಿಕೆ, ಪ್ರವಾಸೋದ್ಯಮ, ಶಿಕ್ಷಣ ಹಾಗೂ ತುರ್ತು ವೈದ್ಯಕೀಯ ಉದ್ದೇಶಗಳಿಗಾಗಿ ಪ್ರತಿನಿತ್ಯ ಅನೇಕರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಇಂತಹ ಸಂದರ್ಭದಲ್ಲಿ ವಿಮಾನ ಸೇವೆ ಸ್ಥಗಿತಗೊಂಡರೆ ಈ ಭಾಗದ ಜನರಿಗೆ ತೊಂದರೆಯಾಗಲಿದೆ.

ಆದ್ದರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಬಾರದು. ರಾಜ್ಯದ ಇತರ ವಿಮಾನ ನಿಲ್ದಾಣಗಳಿಗೆ ನೀಡುತ್ತಿರುವ ಪ್ರೋತ್ಸಾಹ ಮತ್ತು ಸಹಕಾರವನ್ನು ಶಿವಮೊಗ್ಗಕ್ಕೂ ನೀಡಬೇಕು. ಕನಿಷ್ಠ ಬೆಂಗಳೂರು ಮಾರ್ಗದ ವಿಮಾನ ಸಂಪರ್ಕವನ್ನಾದರೂ ಉಳಿಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ., ಜಿಲ್ಲಾ ವಕ್ತಾರ ಜ್ಯೋತಿ ಪ್ರಕಾಶ್, ರಾಜ್ಯ ಪ್ರಕೋಷ್ಠಗಳ ಸಂಯೋಜಕ ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಮಾಧ್ಯಮ ಪ್ರಮುಖರಾದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್. ಹಾಗೂ ವಿನ್ಸೆಂಟ್ ರೋಡ್ರಿಗಸ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsChrist King

Kalahamsa Infotech private limitedKalpa News Advertising Disclaimer

Tags: AirportB Y RaghavendraShimogaShivamogga Newsಕುವೆಂಪು ವಿಮಾನ ನಿಲ್ದಾಣಬಿ.ವೈ. ರಾಘವೇಂದ್ರವಿಮಾನ ನಿಲ್ದಾಣವಿಮಾನ ಸೇವೆಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡವನ್ನು ಕಡ್ಡಾಯಗೊಳಿಸಿರುವ ಶ್ರೀ ಕೃಷ್ಣ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ

kalpa News

kalpa News

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL