No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Monday, November 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಬೀದರ್ | ಟನ್ ಕಬ್ಬಿಗೆ ₹4 ಸಾವಿರ ದರಕ್ಕೆ ಆಗ್ರಹ: ರೈತರ ಧರಣಿಗೆ ಜೆಡಿಎಸ್ ಸಾಥ್

kalpa News by kalpa News
November 16, 2026
in News, ಬೀದರ್
0
Bidar Sugarcane farmers protest JDS Support
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೀದರ್  | 

ಪ್ರತಿ ಟನ್ ಕಬ್ಬಿಗೆ ₹4,000 ದರ ನಿಗದಿಪಡಿಸಬೇಕು, ಕಬ್ಬಿಗೆ ಕನಿಷ್ಠ ₹500 ಬೆಂಬಲ ಬೆಲೆ ಘೋಷಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‌ನಲ್ಲಿ (Bidar) ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಮಾಜಿ ಸಚಿವ ಹಾಗೂ ಜೆಡಿಎಸ್ (JDS) ಪಕ್ಷದ ಹಿರಿಯ ಮುಖಂಡ ಬಂಡೆಪ್ಪ ಖಾಶೆಂಪುರ್ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬೀದರ್ ನಗರದ ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗದಲ್ಲಿ ಜಿಲ್ಲಾ ರೈತ ಸಂಘಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನವೆಂಬರ್ 12ರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಶನಿವಾರ ಧರಣಿ ಸ್ಥಳಕ್ಕೆ ಜೆಡಿಎಸ್ ಮುಖಂಡರೊಂದಿಗೆ ಭೇಟಿ ನೀಡಿದ ಬಂಡೆಪ್ಪ ಖಾಶೆಂಪುರ್ ಅವರು ರೈತರ ಬೇಡಿಕೆಗಳಿಗೆ ಬೆಂಬಲ ಸೂಚಿಸಿದರು.

Christ King

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕಬ್ಬು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಜಿಲ್ಲೆಯ ಸಾವಿರಾರು ರೈತ ಕುಟುಂಬಗಳ ಜೀವನೋಪಾಯ ಕಬ್ಬಿನ ಬೆಳೆಯನ್ನೇ ಅವಲಂಬಿಸಿದೆ. ಹೀಗಾಗಿ ಕಬ್ಬಿಗೆ ನ್ಯಾಯಯುತ ಬೆಲೆ ದೊರಕಿಸುವ ನಿಟ್ಟಿನಲ್ಲಿ ರೈತರು ನಡೆಸುತ್ತಿರುವ ಹೋರಾಟ ನ್ಯಾಯಸಮ್ಮತವಾಗಿದೆ. ರೈತರ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಹೋರಾಟಕ್ಕೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ಪ್ರಮುಖ ಮುಖಂಡರೊಂದಿಗೆ ಧರಣಿ ಸ್ಥಳಕ್ಕೆ ಆಗಮಿಸಿದ್ದು, ರೈತರ ಬೇಡಿಕೆಗಳ ಪರವಾಗಿ ಪಕ್ಷ ನಿಲ್ಲಲಿದೆ. ಇದೇ ತಿಂಗಳ 18 ಮತ್ತು 19ರಂದು ರೈತರು ಹಮ್ಮಿಕೊಂಡಿರುವ ಬೃಹತ್ ಹೋರಾಟಕ್ಕೂ ನಮ್ಮ ಬೆಂಬಲವಿದೆ ಎಂದು ಭರವಸೆ ನೀಡಿದರು.

ಕಬ್ಬಿಗೆ ₹4 ಸಾವಿರ ದರ ವೈಜ್ಞಾನಿಕ ಬೇಡಿಕೆ

ಪ್ರತಿ ಟನ್ ಕಬ್ಬಿಗೆ ₹4,000 ದರ ನೀಡಬೇಕು ಹಾಗೂ ಕನಿಷ್ಠ ₹500 ಬೆಂಬಲ ಬೆಲೆ ಘೋಷಿಸಬೇಕು ಎಂದು ಜೆಡಿಎಸ್ ವತಿಯಿಂದ ಈ ಹಿಂದೆಯೇ ಮಾಧ್ಯಮಗೋಷ್ಠಿ ನಡೆಸಿ ಸರ್ಕಾರವನ್ನು ಒತ್ತಾಯಿಸಲಾಗಿದೆ. ರೈತರು ಪ್ರತಿ ಟನ್ ಕಬ್ಬಿಗೆ ₹4,000 ದರ ಕೇಳುತ್ತಿರುವುದು ಅವೈಜ್ಞಾನಿಕ ಬೇಡಿಕೆಯಲ್ಲ. ಅದು ರೈತರ ಉತ್ಪಾದನಾ ವೆಚ್ಚ ಮತ್ತು ಅವರ ಜೀವನ ನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ನ್ಯಾಯಯುತ ಹಾಗೂ ವೈಜ್ಞಾನಿಕ ಬೇಡಿಕೆಯಾಗಿದೆ ಎಂದು ಬಂಡೆಪ್ಪ ಖಾಶೆಂಪುರ್ ಅಭಿಪ್ರಾಯಪಟ್ಟರು.

PES Shivamogga

Bidar: ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಸರ್ಕಾರವೇ ನಡೆಸಲಿ

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯನ್ನು ಖಾಸಗಿಯವರಿಗೆ ಲೀಸ್‌ಗೆ ನೀಡುವ ಬದಲು ಸರ್ಕಾರವೇ ನಡೆಸಬೇಕು ಎಂದು ರೈತರು ಒತ್ತಾಯಿಸಬೇಕು ಎಂದು ಅವರು ಹೇಳಿದರು.

ಇನ್ನೂ ಒಂದೂವರೆ ವರ್ಷ ಸರ್ಕಾರವೇ ಕಾರ್ಖಾನೆಯನ್ನು ನಡೆಸಲಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ನಾವೇ ಸರ್ಕಾರದ ಮೂಲಕ ಕಾರ್ಖಾನೆಯನ್ನು ಸಮರ್ಪಕವಾಗಿ ಆರಂಭಿಸಿ ನಡೆಸುವ ವ್ಯವಸ್ಥೆ ಮಾಡುತ್ತೇವೆ. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ₹20 ಕೋಟಿ ಅನುದಾನ ನೀಡಿ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಪುನರಾರಂಭಿಸಲು ಕ್ರಮ ಕೈಗೊಂಡಿದ್ದೆವು. ಕಾರ್ಖಾನೆಯನ್ನು ಹೇಗೆ ಆರಂಭಿಸಲಾಯಿತು ಎಂಬುದಕ್ಕೆ ದೊಡ್ಡ ಇತಿಹಾಸವೇ ಇದೆ. ಅದನ್ನು ಪುಸ್ತಕದ ರೂಪದಲ್ಲಿಯೂ ವಿವರಿಸಬಹುದು ಎಂದು ತಿಳಿಸಿದರು.

ರೈತರ ಸಂಕಷ್ಟಕ್ಕೆ ಸ್ಪಂದಿಸುವ ಬದ್ಧತೆ ಸರ್ಕಾರಕ್ಕಿರಬೇಕು

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಂಡೆಪ್ಪ ಖಾಶೆಂಪುರ್, ಬರ ಪರಿಹಾರದ ಹೆಸರಿನಲ್ಲಿ ರೈತರ ಖಾತೆಗಳಿಗೆ ಕೇವಲ ₹500 ಮತ್ತು ₹1,000 ಜಮೆ ಮಾಡಲಾಗಿದೆ. ಈ ಕುರಿತು ಸಂಬಂಧಪಟ್ಟ ಸಚಿವರು ಹಾಗೂ ಮುಖ್ಯಮಂತ್ರಿಗಳಿಂದ ಸಮರ್ಪಕ ಉತ್ತರವಿಲ್ಲ. ಸರ್ಕಾರ ನೀಡಿದ ಆದೇಶವನ್ನು ಅಧಿಕಾರಿಗಳು ಜಾರಿಗೊಳಿಸಿದ್ದಾರೆ ಅಷ್ಟೇ ಎಂದು ಟೀಕಿಸಿದರು.

ಮೊದಲ ಹಂತದಲ್ಲಿ ಪ್ರತಿ ಹೆಕ್ಟೇರ್‌ಗೆ ₹2,500 ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ರೈತರಿಂದ ವ್ಯಾಪಕ ಆಕ್ರೋಶ ವ್ಯಕ್ತವಾದ ಬಳಿಕ ಪ್ರತಿ ಕುಟುಂಬಕ್ಕೆ ₹5,000 ನೀಡುವುದಾಗಿ ತಿಳಿಸಿತು. ಆದರೆ ಈ ಪರಿಹಾರ ಮೊತ್ತದಿಂದ ರೈತರ ಸಂಕಷ್ಟ ಪರಿಹಾರವಾಗಲು ಸಾಧ್ಯವೇ ಎಂಬ ಪ್ರಶ್ನೆ ಎದುರಾಗಿದೆ ಎಂದರು.

ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ರೈತರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಎರಡು ಬಾರಿ ರೈತರ ಸಾಲ ಮನ್ನಾ ಮಾಡಲಾಗಿತ್ತು. ಪ್ರತಿ ಖಾತೆಗೆ ₹1 ಲಕ್ಷದವರೆಗೆ ಸಾಲ ಮನ್ನಾ ಮಾಡಿದ್ದೆವು. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಮತ್ತು ಸರ್ಕಾರ ನಡೆಸುವವರಿಗೆ ಬದ್ಧತೆ ಇರಬೇಕು ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Also Read>> ಬೆಂಗಳೂರಿನ FEI ಡ್ರೆಸೇಜ್ ವರ್ಲ್ಡ್ ಚಾಲೆಂಜ್‌ನಲ್ಲಿ ಮಿಂಚಲು ಸಜ್ಜಾದ ತಾರಿಣಿ ಲೋಧಾ

ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರಿಂದಲೂ ಬೆಂಬಲ

ರೈತರ ಧರಣಿ ಸ್ಥಳಕ್ಕೆ ಜೆಡಿಎಸ್ ಮುಖಂಡರು ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸುತ್ತಿದ್ದ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ಅವರ ಸಮ್ಮುಖದಲ್ಲಿ ಬಿಜೆಪಿ ಮುಖಂಡರು ಕೂಡ ಆಗಮಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲ್ಪೂರ್, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ರೈತ ಸಂಘದ ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಶಿವರಾಜ್ ಪಾಟೀಲ್ ಅತಿವಾಳ ಸೇರಿದಂತೆ ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ರೈತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಶೋಕ್ ಕೊಡಗೆ, ಶಶಿ ಹೊಸಳ್ಳಿ, ಪೀರಪ್ಪ ಯರನಳ್ಳಿ, ಸಜ್ಜದ್ ಸಾಹೇಬ್, ದೇವೇಂದ್ರ ಸೋನಿ, ರಾಜು ಕಡ್ಯಾಳ, ರಾಜಶೇಖರ ಜವಳೆ, ಬಸವರಾಜ್ ಪಾಟೀಲ್ ಹಾರೋಗೇರಿ, ಸುದರ್ಶನ್ ಸುಂದರರಾಜ್, ಬೋಮಗೊಂಡ ಚಿಟ್ಟಾವಾಡಿ, ಅಭಿ ಕಾಳೆ, ಸಂಗು ಚಿದ್ರಿ, ಶಿವಕುಮಾರ್ ಬಾವಿಕಟ್ಟಿ, ಅರುಣ್ ಹೊಸಪೇಟೆ, ಲಲಿತಾ ಕರಂಜೆ, ಸಂಗಮ್ಮ ಪಾಟೀಲ್, ರೇವಣಸಿದ್ದಪ್ಪ ಶಿರಕಟ್ಟನಳ್ಳಿ, ಗಣಪತಿ ಶಂಭು ಕಂಗನಕೋಟ್, ಮನೋಹರ ದಂಡೆ, ಜಾಫೇಡ್ ಕಡ್ಯಾಳ, ತಾನಾಜಿ ತೋರಣೇಕರ್, ಚಿಕಾನ್ ಸಲಿಂ ಸೇರಿದಂತೆ ಹಲವರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Kalpa News Advertising Disclaimer

Tags: Bidarಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಜೆಡಿಎಸ್ ಮುಖಂಡರುಧರಣಿ ಸತ್ಯಾಗ್ರಹಬಂಡೆಪ್ಪ ಖಾಶೆಂಪುರ್ಬೀದರ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನ FEI ಡ್ರೆಸೇಜ್ ವರ್ಲ್ಡ್ ಚಾಲೆಂಜ್‌ನಲ್ಲಿ ಮಿಂಚಲು ಸಜ್ಜಾದ ತಾರಿಣಿ ಲೋಧಾ

kalpa News

kalpa News

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL