ಕಲ್ಪ ಮೀಡಿಯಾ ಹೌಸ್ | ರಿಪ್ಪನ್ಪೇಟೆ (ಶಿವಮೊಗ್ಗ) |
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ಪೇಟೆಯಲ್ಲಿ (Ripponpet) ಆಯ್ಕೆ ಶ್ರೇಣಿ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ರಾಜುನಾಯ್ಕ ಎಸ್. ಅವರು 2023-24ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ (NSS) ರಾಜ್ಯಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2023-24ನೇ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಳೆಹೊನ್ನೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಯಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಎನ್ಎಸ್ಎಸ್ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಿದೆ.
Ripponpet: ಸಮಾಜಮುಖಿ ಕಾರ್ಯಗಳಿಗೆ ಮನ್ನಣೆ
ಎನ್ಎಸ್ಎಸ್ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ, ಶಿಸ್ತು ಹಾಗೂ ರಾಷ್ಟ್ರೀಯ ಭಾವೈಕ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ ಡಾ. ರಾಜುನಾಯ್ಕ ಅವರು ನಿರಂತರವಾಗಿ ಶ್ರಮಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ, ಆರೋಗ್ಯ ಜಾಗೃತಿ, ಪರಿಸರ ಸಂರಕ್ಷಣೆ, ಸಾಮಾಜಿಕ ಅರಿವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಗಳನ್ನು ಪರಿಗಣಿಸಿ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
Also Read>> ‘ಮಾಲ್ಗುಡಿ’ ನೆನಪುಗಳ ತಾಣ ಅರಸಾಳು ರೈಲು ನಿಲ್ದಾಣದಲ್ಲಿ ನಿಲ್ದಾಣ ಮಹೋತ್ಸವ ಆಚರಣೆ
ಹೃತ್ಪೂರ್ವಕ ಅಭಿನಂದನೆ
ಡಾ. ರಾಜುನಾಯ್ಕ ಎಸ್. ಅವರ ಸಾಧನೆಗೆ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಎನ್ಎಸ್ಎಸ್ ಸ್ವಯಂಸೇವಕರು ಮತ್ತು ವಿದ್ಯಾರ್ಥಿಗಳು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.
ಅವರ ಸೇವೆ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಹಾಗೂ ಇನ್ನಷ್ಟು ಪ್ರಶಸ್ತಿ, ಗೌರವಗಳು ಅವರನ್ನು ಅರಸಿ ಬರಲಿ ಎಂದು ಬಂಧು-ಮಿತ್ರರು ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











