ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ (Shivamogga) ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಮಾರ್ಗಗಳ ತುರ್ತು ಕಾಮಗಾರಿ ಹಾಗೂ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 22ರಂದು ಶಿವಮೊಗ್ಗದ ಹಲವು ಬಡಾವಣೆಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಗರದ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ವಿದ್ಯುತ್ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು, ಮತ್ತೊಂದೆಡೆ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುತ್ತದೆ.
ಮಂಡ್ಲಿ ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ವ್ಯಾಪ್ತಿಯಲ್ಲಿ ವಿದ್ಯುತ್ ತುರ್ತು ಕಾಮಗಾರಿ ನಡೆಯಲಿರುವುದರಿಂದ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಅವಧಿಯಲ್ಲಿ ಇಲಿಯಾಜ್ ನಗರದ 9ರಿಂದ 14ನೇ ಕ್ರಾಸ್, ಮಂಡಕ್ಕಿಭಟ್ಟಿ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದಾನಗರ, ಮಲ್ನಾಡ್ ಕೋಕೋ, ಕಲ್ಲೂರ್ ಮಂಡ್ಲಿ, ಇಂಡಸ್ಟ್ರಿಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
Shivamogga: ನಗರ ಉಪವಿಭಾಗ-1ರಲ್ಲಿ ಮಧ್ಯಾಹ್ನ 2ರವರೆಗೆ ವಿದ್ಯುತ್ ಸ್ಥಗಿತ
ಇನ್ನು ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗದ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರ, ಮ್ಯಾಕ್ಸ್ ಲೇಔಟ್, ಎನ್.ಇ.ಎಸ್. ಬಡಾವಣೆ, ಚೈತನ್ಯ ಟೆಕ್ನೋ ಶಾಲೆ, ಸವಳಂಗ ರಸ್ತೆ, ಡಿ.ವಿ.ಎಸ್. ಕಾಲೋನಿ, ನವುಲೆ ಇಂದಿರಾಗಾಂಧಿ ಬಡಾವಣೆ, ನವುಲೆ, ಶಿವಬಸವನಗರ, ಶ್ರೀಸಾಯಿ ಬಡಾವಣೆ, ಮಲ್ನಾಡ್ ಕೌಂಟಿ, ಬೊಮ್ಮನಕಟ್ಟೆ ಜಿ ಮತ್ತು ಎಚ್ ಬ್ಲಾಕ್, ನವುಲೆ ಹೊಸೂರು, ಕೃಷಿ ಕಾಲೇಜು, ಪರ್ಫೆಕ್ಟ್ ಅಲಾಯ್ ಫೋಕಸ್ ಡೈ ಕಾಸ್ಟ್, ನ್ಯೂ ಡೈಕಾಸ್ಟ್ ಹಾಗೂ ಬಾಪೂಜಿ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
Also Read>> ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಅಕ್ರಮ ಒತ್ತುವರಿ ತೆರವು: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ
ಸಾರ್ವಜನಿಕರಿಗೆ ಮೆಸ್ಕಾಂ ಮನವಿ
ವಿದ್ಯುತ್ ಮಾರ್ಗಗಳ ತುರ್ತು ಹಾಗೂ ನಿರ್ವಹಣಾ ಕಾಮಗಾರಿಗಳನ್ನು ಸುಗಮವಾಗಿ ಕೈಗೊಳ್ಳಲು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ವಿದ್ಯುತ್ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಪ್ರದೇಶಗಳ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










