ನವದೆಹಲಿ: ಬಿಜೆಪಿ ಹಿರಿಯ ಮುಖಂಡ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಏಮ್‌ಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
ಈ ಕುರಿತಂತೆ ಆಸ್ಪತ್ರೆಯ ಅಧಿಕಾರಿಗಳು ಅಧಿಕೃತ ಹೇಳಿಕೆ ನೀಡಿದ್ದು, ನಿಯಮಿತ ತಪಾಸಣೆಗಾಗಿ ವಾಜಪೇಯಿ ಅವರನ್ನು ಅಡ್ಮಿಟ್ ಮಾಡಿಕೊಳ್ಳಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ.
ಈ ಕುರಿತಂತೆ ಏಮ್‌ಸ್ ನಿರ್ದೇಶಕ ರಣ್ ದೀಪ್ ಗುಲಾರಿಯಾ ನೇತೃತ್ವದ ತಂಡ ಅಟಲ್ ಜೀ ಆರೋಗ್ಯ ತಪಾಸಣೆ ಮಾಡುತ್ತಿದ್ದು, ಗುಲಾರಿಯಾ ಅವರು ಅಟಲ್ ಜೀ ಅವರ ಆರೋಗ್ಯವನ್ನು ಹಲವಾರು ವರ್ಷಗಳಿಂದ ಗಮನಿಸುತ್ತಿದ್ದಾರೆ.
Delhi: Prime Minister Narendra Modi arrives at All India Institute of Medical Sciences (AIIMS) to visit former PM Atal Bihari Vajpayee. pic.twitter.com/NRnDSCsBlH
— ANI (@ANI) June 11, 2018
ಇನ್ನು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಆಡ್ವಾಣಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರುಗಳು ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಜೀ ಅವರ ಆರೋಗ್ಯ ವಿಚಾರಿಸಿದ್ದಾರೆ.
Delhi: Union Home Minister Rajnath Singh & senior BJP leader LK Advani arrive at All India Institute of Medical Sciences (AIIMS) to visit former PM Atal Bihari Vajpayee. pic.twitter.com/7Ur3Q28CIn
— ANI (@ANI) June 11, 2018
Discussion about this post