ಮೈಸೂರು: ಐದು ವರ್ಷ ಮುಖ್ಯಮಂತ್ರಿಯಾಗಿ ಪೂರ್ಣ ಆಡಳಿತ ನಡೆಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಣದ ಪ್ರಭಾವ ಹಾಗೂ ಜಾತಿ ರಾಜಕಾರಣದಿಂದ ಸೋತರಂತೆ: ಹೀಗೆ ಹೇಳಿದ್ದು ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ..
ಮೈಸೂರಿನಲ್ಲಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹಣದ ಪ್ರಭಾವ ಮತ್ತು ಜಾತಿ ರಾಜಕಾರಣದಿಂದ ನನ್ನ ತಂದೆ ಸಿದ್ದರಾಮಯ್ಯ ಅವರು ಸೋಲನುಭವಿಸಬೇಕಾಯಿತು ಎಂದಿದ್ದಾರೆ.
ತರ ಪಕ್ಷಗಳ ಹಣದ ಪ್ರಭಾವ ಮತ್ತು ಜಾತಿ ಪ್ರಾಬಲ್ಯದಿಂದ ನನ್ನ ತಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಬೇಕಾಯಿತು. ಆದರೆ ಬಾದಾಮಿ ಜನತೆ ಕೈಬಿಡಲಿಲ್ಲ. ನನ್ನ ತಂದೆಯವರನ್ನು ಗೆಲ್ಲಿಸಿದ್ದಕಾಗಿ ಬಾದಾಮಿ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರ ವಿರುದ್ಧ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲನುಭವಿಸಿದ್ದರು. ಆದರೆ ಬಾದಾಮಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ. ಶ್ರೀರಾಮುಲು ವಿರುದ್ಧ ಕೇವಲ 1696 ಮತಳಿಂದ ಜಯಸಾಧಿಸಿದ್ದರು.
Discussion about this post