ನವದೆಹಲಿ: ಇಡಿಯ ದೇಶ ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ವಿರೋಧಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರತಿಪಕ್ಷಗಳ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ರಾಹುಲ್, ಮಹಾಘಟಬಂಧನ ಕೇವಲ ರಾಜಕೀಯ ಕಾರಣಕ್ಕಾಗಿ ಏರ್ಪಟ್ಟಿರುವುದಲ್ಲ. ಬದಲಾಗಿ, ಇದೊಂದು ಜನರ ಸೆಂಟಿಮೆಂಟ್ ಎಂದು ವ್ಯಾಖ್ಯಾನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಿರುವುದು ದೇಶದಲ್ಲಿ ಬಿಜೆಪಿ ಹೊರತಾಗಿನ ಮೈತ್ರಿಗೆ ಬಲ ಬಂದಿದೆ. ಎಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸಮಾರಂಭಕ್ಕೆ ಬಿಜೆಪಿ ಹೊರತಾಗಿನ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಾದೇಶಿಕ ಹಾಗೂ ರಾಷ್ಟ್ರೀಯ ಮಟ್ಟದ ನಾಯಕರುಗಳು ಆಗಮಿಸಿದ್ದು, ನಮ್ಮಲ್ಲಿನ ಒಗ್ಗಟ್ಟನ್ನು ತೋರಿಸಿದೆ ಎಂದಿದ್ದಾರೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಬಿಜೆಪಿ ಆಡಳಿತದಲ್ಲಿ ಜಿಎಸ್‌ಟಿ ಜಾರಿಯಿಂದ ತೊಂದರೆಯಾಗಿದ್ದರೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಾಗಿ ಜನರು ನರಳುತ್ತಿದ್ದಾರೆ. ಆದರೆ, ಈ ಕುರಿತಂತೆ ಪ್ರಧಾನಿಯವರು ಮಾತನಾಡುವುದಿಲ್ಲ ಎಂದು ಕಟಕಿಯಾಡಿದ್ದಾರೆ.
Discussion about this post