ಶ್ರೀನಗರ: ಛತ್ತೀಸ್‌ಘಡ ಕೇಡರ್ ಐಎಎಸ್ ಅಧಿಕಾರಿ ಬಿವಿಆರ್ ಸುಬ್ರಹ್ಮಣಿಯಂ ಅವರು ಜಮ್ಮು ಕಾಶ್ಮೀರದ ಮುಖ್ಯ ಕಾರ್ಯದರ್ಶಿಯಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ನಿರ್ಗಮಿತ ಸಿಎಸ್ ಬಿಬಿ ವ್ಯಾಸ್ ಅವರಿಂದ ಬಿವಿಆರ್ ಅಧಿಕಾರ ವಹಿಸಿಕೊಂಡರು. ಇನ್ನು ವ್ಯಾಸ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲ ಎನ್.ಎನ್. ವೋಹ್ರಾ ಅವರಿಗೆ ವಿಶೇಷ ಸಲಹೆಗಾರರಾಗಿ ನೇಮಕವಾಗಿದ್ದಾರೆ.
1987ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸುಬ್ರಹ್ಮಣಿಯಂ, ಛತ್ತೀಸ್‌ಘಡದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ, ಇವರು ಹಲವು ಬಾರಿ ಕೇಂದ್ರ ಸರ್ಕಾರದಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
Discussion about this post