No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇಚ್ಛೆ ಬಲವಾಗಿದ್ದರೆ ದೇವರು ತಥಾಸ್ತು ಎನ್ನುತ್ತಾನೆ: ರಾಘವೇಶ್ವರ ಶ್ರೀ

kalpa News by kalpa News
August 2, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಯಾವ ಇಚ್ಛೆಗೆ ಬಲವಾದ ದಾಢ್ಯ ಇರುವುದೋ ಅದಕ್ಕೆ ಸಂಕಲ್ಪ ಎಂದು ಹೆಸರು. ಇಚ್ಛೆ ಸಂಕಲ್ಪವಾದಾಗ ಕಾರ್ಯ ಸಾಧ್ಯವಾಗುತ್ತದೆ. ಯಾವ ಇಚ್ಛೆ ದೃಢವಾದ್ದು, ಯಾವ ಇಚ್ಛೆ ಜೊಳ್ಳು ಎಂದು ಭಗವಂತನೂ ನೋಡುತ್ತಾನೆ. ಇಚ್ಚೆ ಬಲವಾಗಿದ್ದಾಗ ದೇವರೂ ಅದಕ್ಕೆ ತಥಾಸ್ತು ಎಂದು ಹೇಳುತ್ತಾನೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

ರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠವಾದ ಗಿರಿನಗರದ ಶ್ರೀರಾಮಾಶ್ರಮದಲ್ಲಿ ಗೋಸ್ವರ್ಗ ಚಾತುರ್ಮಾಸ್ಯದ ಧರ್ಮ ಸಭೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ನಾವು ಸಂನ್ಯಾಸ ಸ್ವೀಕರಿಸಿದ್ದ ಸ್ಥಳದಲ್ಲೇ ಇಪ್ಪತ್ತೈದನೇ ಚಾತುರ್ಮಾಸ್ಯ ವ್ರತ ಸ್ವೀಕಾರ ಮಾಡುತ್ತಿರುವುದು ಸಂತಸದ ವಿಚಾರ. ಭಾರತೀಯ ಪರಂಪರೆಯಲ್ಲಿ ಇಪ್ಪತ್ತೈದು – ಐವತ್ತು ವರ್ಷಳಿಗೆ ಮಹತ್ವವಿಲ್ಲ, ಬದಲಾಗಿ 48 ವರ್ಷಕ್ಕೆ ಪೂರ್ಣ ಮಂಡಲ – 24 ವರ್ಷಕ್ಕೆ ಅರ್ಧಮಂಡಲವಾಗಿ ಆಚರಿಸುತ್ತಾರೆ. 24ವರ್ಷಗಳ ಅರ್ಧಮಂಡಲವನ್ನು ಪೂರೈಸಿ, ಉತ್ತರಾರ್ಧವನ್ನು ಇಲ್ಲಿಂದಲೇ ಆರಂಭಿಸುವಂತೆ ಆಗಿರುವುದು ದೈವೀ ಸಂಕಲ್ಪ ಎಂದರು.

ಗೋಸ್ವರ್ಗ ಗೋವುಗಳಿಗೆ ಸಮರ್ಪಿತವಾದಂತೆ, ಈ ಚಾತುರ್ಮಾಸ್ಯ ಗೋಸ್ವರ್ಗಕ್ಕೆ ಸಮರ್ಪಿತ. ಎರಡು ತಿಂಗಳುಗಳ ಕಾಲ ಬೆಂಗಳೂರಿನಲ್ಲಿ ಇದ್ದಕೊಂಡು ಗೋಸ್ವರ್ಗಕ್ಕೆ ಚೈತನ್ಯ ತುಂಬುವ ಕೆಲಸವಾಗಲಿದೆ. ಗೋಸ್ವರ್ಗವನ್ನು ಸರ್ವಸುಸಜ್ಜಿತವಾಗಿಸಿ ಜಗತ್ತಿಗೆ ಮಾದರಿಯಾಗಿಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಪುನರ್ವಸು ಕಟ್ಟಡಕ್ಕೂ ನಮಗೂ ಆತ್ಮಬಂಧವಿದೆ:

ದೊಡ್ಡ ಗುರುಗಳು ನಮ್ಮನ್ನು ವಿವಿಧ ರೀತಿಯಲ್ಲಿ ಪರೀಕ್ಷಿಸಿ, ಉತ್ತರಾಧಿಕಾರಿಯಾಗಿ ಘೋಷಿಸಿದ್ದು ಇದೇ ಪುನರ್ವಸು ಕಟ್ಟಡದ ಜಾಗದಲ್ಲಾಗಿದೆ. ಸಂನ್ಯಾಸ ಸ್ವೀಕಾರ, ಮಹಾವಾಕ್ಯೋಪದೇಶ, ದೊಡ್ದ ಗುರುಗಳ ಮಾರ್ಗದರ್ಶನ ಎಲ್ಲವೂ ಇದೇ ಜಾಗದಲ್ಲಾಗಿದ್ದು, ಈ ಜಾಗಕ್ಕೂ ನಮಗೂ ಆತ್ಮಬಂಧವಿದೆ. ದೊಡ್ದಗುರುಗಳು ತಮ್ಮ ಜೀವನದ ಸಂಧ್ಯಾಕಾಲದಲ್ಲಿ ಹೆಚ್ಚಿನ ಸಮಯ ಇದೇ ಜಾಗದಲ್ಲಿ ವಸತಿ ಮಾಡಿದ್ದರು. ಈ ಜಾಗದಲ್ಲಿ ಇಂದು 25ನೇ ಚಾತುರ್ಮಾಸ್ಯ ವ್ರತಸ್ವೀಕಾರ ಮಾಡಿರುವುದು ಸಂತಸಮೂಡಿಸಿದೆ ಎಂದರು.

ವಿದ್ವಾನ್ ಸೂರ್ಯನಾರಾಯಣ ಹಿತ್ಲಳ್ಳಿಯವರು ಮಾತನಾಡಿ, ಬ್ರಾಹ್ಮಣರು ವೇದದ ಜೊತೆ ಗೋವುಗಳನ್ನು ಸಂರಕ್ಷಿಸಿಕೊಂಡು ಬಂದವರಾಗಿದ್ದು, ಇತ್ತೀಚೆಗೆ ವೇದಗಳ ಜೊತೆ ಗೋವುಗಳನ್ನು ಮರೆಯುತ್ತಿದ್ದೇವೆ. ಆದರೆ ಪೂಜ್ಯ ರಾಘವೇಶ್ವರ ಶ್ರೀಗಳು ಗೋವುಗಳ ಸಂರಕ್ಷಣೆಯನ್ನು ನೆನಪಿಸುವ ಕಾರ್ಯಮಾಡುತ್ತಿದ್ದಾರೆ. ಗುರುವನ್ನು ಚಂದನಕ್ಕೆ ಹೋಲಿಸಬಹುದಾಗಿದ್ದು, ಚಂದನ ಸುಗಂಧವನ್ನೇ ಹೊರಸೂಸುವಂತೆ ಗುರುಗಳು ಜ್ಞಾನವನ್ನು, ಉತ್ತಮ ವಿಚಾರಗಳನ್ನು ಸಮಾಜಕ್ಕೆ ನೀಡುತ್ತಾರೆ ಎಂದರು.

ಅಖಿಲ ಹವ್ಯಕ ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ್ ಕಜೆ ಮಾತನಾಡಿ, ಶ್ರೀಗಳು ಗೋಸ್ವರ್ಗವನ್ನು ಮಾತ್ರ ನಿರ್ಮಿಸಿಲ್ಲ, ಗೋವಿನಲ್ಲೇ ಸ್ವರ್ಗವಿದೆ ಎಂಬ ಸತ್ಯವನ್ನು ಜಗತ್ತಿಗೆ ತಿಳಿಸುತ್ತಿದ್ದಾರೆ. ‘ಸ್ವರ್ಗಕ್ಕೆ ಮೂರೇ ಗೇಣು’ ಎಂಬ ಮಾತು ಇದ್ದು, ಇಲ್ಲಿ ಮೂರು ಗೇಣುಗಳ ಕೊರತೆ ಸದಾ ಇರುತ್ತದೆ. ಆದರೆ ಗೋಸ್ವರ್ಗದ ಮೂಲಕ ಆ ಕೊರತೆಯನ್ನು ನೀಗಿಸಿ, ಗೋಸ್ವರ್ಗವನ್ನು ಭುವಿಗಿಳಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಪ್ರಾಸ್ತಾವಿಕ ಮಾತನಾಡಿದ ವಿದ್ವಾನ್ ಜಗದೀಶ ಶರ್ಮರು, ಪ್ರತಿ ಚಾತುರ್ಮಾಸ್ಯಕ್ಕೆ ಒಂದು ಉದ್ದೇಶವನ್ನು ಇಟ್ಟುಕೊಂಡು, ಸಮಗ್ರ ಸಮಾಜವನ್ನು ತೊಡಗಿಸಿಕೊಳ್ಳುವಂತೆ ಮಾಡಿ; ಚಾತುರ್ಮಾಸ್ಯಕ್ಕೆ ವಿಶಿಷ್ಟ ರೂಪ ನೀಡಿದವರು ಶ್ರೀಗಳು. ವಿಶಿಷ್ಟ ಕಲ್ಪನೆಯ ಗೋಧಾಮ ಗೋಸ್ವರ್ಗ ವನ್ನು ಸಮಾಜಕ್ಕೆ ಪರಿಚಯಿಸಲು ಈ ಚಾತುರ್ಮಾಸ್ಯ ನಡೆಯಲಿದೆ. ಭಾನ್ಕುಳಿಯಲ್ಲಿರು ವಿಶ್ವದ ಏಕೈಕ ಗೋಸ್ವರ್ಗವನ್ನು ಅಂತಾರಾಷ್ಟ್ರೀಯ ಮಟ್ಟದ ಕೇಂದ್ರವಾಗಿಸಬೇಕಿದೆ ಎಂದರು.

ಇದಕ್ಕೂ ಮೊದಲು ಬೆಳಗ್ಗೆ, ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಶ್ರೀಗಳು, ತಮ್ಮ 25ನೇ ಚಾತುರ್ಮಾಸ್ಯವ್ರತವನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ವ್ಯಾಸಪೂಜೆಯನ್ನು ಕೈಗೊಳ್ಳುವ ಮೂಲಕ ವಿಧ್ಯುಕ್ತವಾಗಿ ಆರಂಭಿಸಿದರು. ಶ್ರೀರಾಮಾದಿ ದೇವರ ಪೂಜೆಯನ್ನು ಮಾಡಿ, ನಿಂಬೆಯಹಣ್ಣಿನಲ್ಲಿ ಕೃಷ್ಣಾದಿ ದೇವತೆಗಳು ಹಾಗೂ ವ್ಯಾಸಾದಿ ಋಷಿಗಳನ್ನು ಆವಾಹನೆಮಾಡಿ, ಶಾಂಕರ ಪರಂಪರೆಯ ಮಠೀಯ ಪದ್ಧತಿಯಂತೆ ಪೂಜಿಸುವುದರ ಮೂಲಕ ವ್ಯಾಸಪೂಜೆ ಸಂಪನ್ನವಾಯಿತು. ಶ್ರೀ ಮುಗಳಿ ತಿರುಮಲೇಶ್ವರ ಭಟ್ ಅವರು ಸರ್ವಸೇವೆ ಸಮರ್ಪಿಸಿದರೆ, ಚಾತುರ್ಮಾಸ್ಯಸಮಿತಿಯ ಪರವಾಗಿ ಅಧ್ಯಕ್ಷರಾದ ರಮೇಶ್ ಕೋರಮಂಗಲ ಫಲಸಮರ್ಪಿಸಿ, ಸಭಾಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಗೋಸ್ವರ್ಗದ ಮೊದಲ ಉತ್ಪನ್ನ ಸ್ವರ್ಗಸಾರ ಬೇವು ಮಿಶ್ರಿತ ಎರೆಗೊಬ್ಬರ ಲೋಕಾರ್ಪಣೆಯಾಯಿತು.

ಕಾರ್ಯಕ್ರಮದಲ್ಲಿ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಲ್, ಮುಖ್ಯ ನಿರ್ವಹಣಾಧಿಕಾರಿಗಳಾದ ಕೆ ಜಿ ಭಟ್, ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು, ಚಾತುರ್ಮಾಸ್ಯ ನಿರ್ವಹಣಾ ಸಮಿತಿಯ ದಿಗ್ದರ್ಶಕರಾದ ಯು.ಎಸ್.ಜಿ. ಭಟ್, ರಾಮಚಂದ್ರಭಟ್ ಕೆಕ್ಕಾರು, ಅಧ್ಯಕ್ಷರಾದ ರಮೇಶ್ ಕೊರಮಂಗಲ, ಪ್ರಧಾನ ಕಾರ್ಯದರ್ಶಿ ವಾದಿರಾಜ ಸಾಮಗ, ಮಹಾಮಂಡಲದ ಅಧ್ಯಕ್ಷರಾದ ಈಶ್ವರೀ ಬೇರ್ಕಡವು, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಪ್ಪು, ಸೇರಿದಂತೆ ಶ್ರೀಸಂಸ್ಥಾನದ ಕಾರ್ಯದರ್ಶಿ – ಸಹಕಾರ್ಯದರ್ಶಿಗಳು, ಎಲ್ಲಾ ಸಮಿತಿಯ ಪದಾಧಿಕಾರಿಗಳು, ಎಲ್ಲಾ ಮಂಡಲಗಳ ಪದಾಧಿಕಾರಿಗಳು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ವ್ಯಾಸಮಂತ್ರಾಕ್ಷತೆ ಸ್ವೀಕರಿಸಿದರು.

Tags: Raghaveshwara Sri ChaturmasyaRaghaveshwara SwamijiRamachandra pura matt
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನ್ಮದಿನವೆಂದರೆ ಪ್ರಪಂಚಕ್ಕೆ ನಾವು ಬಂದ ಉದ್ದೇಶ ನೆನೆಸಿಕೊಳ್ಳುವ ದಿನ

Next Post

ಅಕ್ರಮವಾಗಿ ದೇಶ ಪ್ರವೇಶಿಸುವವರಿಗೆ ಬಾಂಗ್ಲಾ ಗಡಿಯಲ್ಲಿ ಕಠಿಣ ತಡೆ

kalpa News

kalpa News

Next Post

ಅಕ್ರಮವಾಗಿ ದೇಶ ಪ್ರವೇಶಿಸುವವರಿಗೆ ಬಾಂಗ್ಲಾ ಗಡಿಯಲ್ಲಿ ಕಠಿಣ ತಡೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL