ಚೆನ್ನೈ: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಪತ್ರಿಕಾ ಮಾಹಿತಿ ನೀಡಿದ್ದು, ಜ್ವರ ಹಾಗೂ ಮೂತ್ರನಾಳ ಸೋಂಕಿನಿಂದ ಬಳಲುತ್ತಿರುವ ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದಿದ್ದಾರೆ.
ಇನ್ನು, ಆಸ್ಪತ್ರೆ ಬಳಿಯಲ್ಲಿ ಜಮಾಯಿಸಿರುವ ಕರುಣಾನಿಧಿ ಅವರ ಅಭಿಮಾನಿಗಳು ಅಲ್ಲೇ ಮೊಕ್ಕಾಂ ಹೂಡಿದ್ದು, ಅವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ.
















