ತಿರುವನಂತಪುರಂ: ಕೇರಳದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಏಕಕಾಲಕ್ಕೆ 22 ಅಣೆಕಟ್ಟೆಗಳ ಗೇಟ್ ತೆರೆಯಲಾಗಿದ್ದು, ಇದು ಕೇರಳಕ್ಕೆ ಐತಿಹಾಸಿಕ ದಿನವಾಗಿದೆ.
ಈ ಕುರಿತಂತೆ ಮಾತನಾಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯದ ಮಟ್ಟಿಗೆ 22 ಅಣೆಕಟ್ಟೆಗಳ ಗೇಟ್ ತೆರೆದಿರುವುದು ಇದೇ ಮೊದಲ ಬಾರಿಯಾಗಿದೆ ಎಂದಿದ್ದಾರೆ.
ಇನ್ನು, ರಾಜ್ಯದಾದ್ಯಂತ ಭಾರೀ ಮಳೆಯ ಪರಿಣಾಮ ಪರಿಸ್ಥಿತಿ ಚಿಂತಾಜನಕವಾಗಿದೆ. ರಾಜ್ಯದೆಲ್ಲೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ರಕ್ಷಣಾ ಕಾರ್ಯ ನಡೆದಿದೆ.
ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಅಣೆಕಟ್ಟೆಗಳ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ ಎಂದಿದ್ದಾರೆ.
Discussion about this post