ಬೆಂಗಳೂರು: ಬೆಂಗಳೂರು ವ್ಯಾಪ್ತಿಯಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ತೆರಿಗೆ ವಿಧಿಸುವ ಚಿಂತನೆ ಮಾಡಿದ್ದ ಬಿಬಿಎಂಪಿ ಜನರ ವಿರೋಧಕ್ಕೆ ಹೆದರಿ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ.
ಈ ಕುರಿತಂತೆ ಅಧಿಕೃತ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬಿಬಿಎಂಪಿ, ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಗಣೇಶೋತ್ಸವ ಆಚರಣೆ ಹಾಗೂ ಸಾರ್ವಜನಿಕವಾಗಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲು ಯಾವುದೇ ರೀತಿಯ ಶುಲ್ಕ ಅಥವಾ ತೆರಿಗೆ ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಪ್ರತಿವರ್ಷದಂತೆ ಈ ಬಾರಿಯೂ ಸಹ ಮುಕ್ತವಾಗಿ, ತೆರಿಗೆ ಹಾಗೂ ಶುಲ್ಕ ಇಲ್ಲದೇ ಗಣೇಶೋತ್ಸವ ಆಚರಣೆ ಹಾಗೂ ಗಣೇಶನನ್ನು ಪ್ರತಿಷ್ಠಾಪನೆ ಮಾಡಬಹುದಾಗಿದೆ ಎಂದು ಹೇಳಿದೆ.
Discussion about this post