ನವದೆಹಲಿ: 2014ರಲ್ಲಿ ಐತಿಹಾಸಿಕ ಜಯ ದಾಖಲಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2019 ಚುನಾವಣೆಯಲ್ಲೂ ಸಹ ಗೆಲ್ಲುವುದು ನಿಶ್ಚಿತವಾಗಿದ್ದು, 227 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.
ಈ ಕುರಿತಂತೆ ಟೈಮ್ಸ್ ನೌ ಸಮೀಕ್ಷಾ ವರದಿಯನ್ನು ಪ್ರಕಟಿಸಿದ್ದು, ಇದರಂತೆ, ಬಿಜೆಪಿ 227 ಸ್ಥಾನಗಳನ್ನು ಗೆಲ್ಲಲಿದ್ದರೆ, ಕಾಂಗ್ರೆಸ್ 78 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಇತರೆ ಪಕ್ಷಗಳು 238 ಸ್ಥಾನಗಳನ್ನು ಗೆಲ್ಲಲಿವೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ 49 ಸ್ಥಾನಗಳನ್ನು ಗೆಲ್ಲಲಿದ್ದು, ಆಂಧ್ರದಲ್ಲಿ 7, ಬಿಹಾರದಲ್ಲಿ 14, ಜಾರ್ಖಂಡ್ನಲ್ಲಿ 12 ಹಾಗೂ ಛತ್ತೀಸ್ಘಡದಲ್ಲಿ 10 ಸ್ಥಾನ ಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.
ಇನ್ನು, ಕರ್ನಾಟಕದಲ್ಲಿ ಕಳೆದ ಬಾರಿ 17 ಸ್ಥಾನಗಳಿಸಿದ್ದ ಬಿಜೆಪಿ ಈ ಬಾರಿ 19 ಸ್ಥಾನಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಭರ್ಜರಿ ಜಯ ದಾಖಲಿಸಲಿದೆ. ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಇರುವ ಸ್ಥಾನಗಳನ್ನೂ ಕಳೆದುಕೊಳ್ಳಲಿವೆ ಎಂದು ಸಮೀಕ್ಷೆ ಹೇಳಿದೆ.
Discussion about this post