ಶಿವಮೊಗ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ. ಇದರೊಂದಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತದ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಆಡಳಿತ ಮತ್ತು ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರು ನೀಡಿದ ಅಭಿವೃದ್ಧಿ ಕಾರ್ಯಗಳು ಜನಪರ ಯೋಜನೆಗಳು ಜನರ ಮನಸ್ಸನ್ನು ಗೆದ್ದಿವೆ. ಜನರ ಪ್ರೀತಿ ವಿಶ್ವಾಸವನ್ನು ನಾವು ಗಳಸಿಕೊಂಡಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಜನರ ಆಶೀರ್ವಾದ ನಮ್ಮ ಮೇಲಿದ್ದು ಈ ಚುನಾವಣೆಯಲ್ಲೂ ಜನರ ಪ್ರೀತಿ ವಿಶ್ವಾಸ ನಮ್ಮ ಮೇಲಿದೆ. ಇದರೊಂದಿಗೆ ಶಿವಮೊಗ್ಗದ ಮಹಾನಗರ ಚುನಾವಣೆಯಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲ್ಲುವುದರ ಮೂಲಕ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಆಡಳಿತ ನಡೆಸಬೇಕು ಎಂದರು.
ನಮ್ಮ ಸಂಘಟನೆ ಬೂತ್ ಸಮಿತಿ, ವಾರ್ಡ್ ಸಮಿತಿ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರದಲ್ಲಿ ಸಂಘಟನೆ ಪ್ರಬಲವಾಗಿದ್ದು ಈ ಬಾರಿ ನಮ್ಮ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಲಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಅರುಣ್, ಪ್ರಮುಖರಾದ ಎಸ್. ದತ್ತಾತ್ರಿ, ರತ್ನಾಕರ ಶೆಣೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Discussion about this post