ಚೆನ್ನೈ: ಡಿಎಂಕೆ ಇತಿಹಾಸದಲ್ಲಿ ಸುಮಾರು 50 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಎಂ.ಕೆ. ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2016 ರಲ್ಲಿ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಡಿಎಂಕೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸ್ಟಾಲಿನ್ ಪಕ್ಷದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. 1969 ಜುಲೈ 29ರಲ್ಲಿ ಕರುಣಾನಿಧಿ ಅವರು ಡಿಎಂಕೆ ಪಕ್ಷದ ಅಧ್ಯಕ್ಷ ಪಟ್ಟ ಅಲಂಕರಿಸಿ, ನಿಧನರಾಗುವವರೆಗೂ ಅದೇ ಸ್ಥಾನದಲ್ಲಿ ಇದ್ದರು. ಇದೀಗ ಆ ಸ್ಥಾನಕ್ಕೆ ಅವರ ಕಿರಿಯ ಪುತ್ರ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಾಮಪತ್ರ ಸಲ್ಲಿಸಿದ್ದರು. ಆದರೆ, ಈ ಸ್ಥಾನಕ್ಕೆ ಬೇರೆ ಯಾರೂ ನಾಮಪತ್ರ ಸಲ್ಲಿಸದೇ ಇದ್ದ ಹಿನ್ನೆಲೆಯಲ್ಲಿ ಸ್ಟಾಲಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Discussion about this post