ಮಂಗಳೂರು: ದೇವೇಗೌಡ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರುಗಳು ಎಂದಿಗೂ ಒಂದಾಗಲು ಸಾಧ್ಯವೇ ಇಲ್ಲ. ಮುಂದಿನ 15 ತಿಂಗಳ ಒಳಗಾಗಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಭವಿಷ್ಯ ನುಡಿದರು.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮೇಲಿನ ಒತ್ತಡಕ್ಕೆ ಮಣಿದು, ಕೆಲವೇ ದಿನಗಳಲ್ಲಿ ಮೈತ್ರಿ ಸರ್ಕಾರ ಬೀಳಿಸುತ್ತೇನೆ ಎಂದು ಮನಸ್ಸಿನಲ್ಲಿ ಆಲೋಚನೆ ಮಾಡಿಕೊಂಡೆ ಸಿದ್ದರಾಮಯ್ಯ ಜೆಡಿಎಸ್ ಗೆ ಬೆಂಬಲ ನೀಡಲು ಒಪ್ಪಿಕೊಂಡಿದ್ದರು ಎಂದರು.
ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದಷ್ಟೇ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆಯೇ ಹೊರತು ಯಾವುದೇ ಒಳ್ಳೆಯ ಉದ್ದೇಶದಿಂದ ಅಸ್ಥಿತ್ವಕ್ಕೆ ಬಂದಿಲ್ಲ. ಹೀಗಾಗಿ, ಇದು ಬಹಳ ಕಾಲ ಬಾಳುವುದಿಲ್ಲ ಎಂದರು.
Discussion about this post