ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಈ ಬಾರಿ ಚಾಲನೆ ನೀಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಒಂದೆಡೆ ನೆರೆ ಹಾಗೂ ಇನ್ನೊಂದೆಡೆ ಪ್ರವಾಹ ಬಾಧಿಸಿರುವ ಹಿನ್ನೆಲೆಯಲ್ಲಿ ಈ ಬಾರಿ ದಸರಾವನ್ನು ಸರಳವಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಈ ಬಾರಿಯ ದಸರಾ ಉದ್ಘಾಟನೆಗೆ ಸುಧಾಮೂರ್ತಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ತಿಳಿಸಿದರು.
ರಾಜ್ಯದ ಕೊಡಗು ಪ್ರವಾಹದಿಂದ ಪೀಡಿತವಾಗಿ ಸಂಕಷ್ಟದಲ್ಲಿದ್ದರೆ, 65 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಮಾಹಿತಿ ನೀಡಿದರು.
Discussion about this post