ಕೋಲ್ಕತ್ತಾ: ಬೆಂಗಾಳಿಯ ಖ್ಯಾತ ನಟಿ ಪಾಯಲ್ ಚಕ್ರವರ್ತಿ ನಿನ್ನೆ ರಾತ್ರಿ ಇಲ್ಲಿನ ಹೊಟೇಲ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ ಎಂದು ವರದಿಯಾಗಿದೆ.
ಮಾಹಿತಿಗಳ ಅನ್ವಯ ಚರ್ಚ್ ರಸ್ತೆಯಲ್ಲಿರುವ ಹೊಟೇಲ್‌ವೊಂದರಲ್ಲಿ ಮಂಗಳವಾರ ಪಾಯಲ್ ಕೊಠಡಿ ತೆಗೆದುಕೊಂಡಿದ್ದಾರೆ. ಇದೇ ಕೊಠಡಿಯಲ್ಲಿ ಆಕೆ ಸಾವನ್ನಪ್ಪಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲದಿದ್ದರೂ, ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ಹೇಳಲಾಗಿದೆ.
ಇನ್ನು ವರದಿಗಳ ಅನ್ವಯ ಆಕೆ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಆಕೆಯ ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Discussion about this post