ಬೆಂಗಳೂರು: ತಮ್ಮ ಅಧಿಕಾರವಧಿಯಲ್ಲಿ ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ಇಂದು ಅಸ್ತು ಎಂದಿದೆ.
ಈ ಕುರಿತಂತೆ ಇಂದು ಅನುಮತಿ ನೀಡಿರುವ ನ್ಯಾಯಾಲಯ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ತನಿಖೆ ನಡೆಸಲು ಅಸ್ತು ಎನ್ನುವ ಜೊತೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದು ಮಾಡುವಂತೆ ಕೋರಿ ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಅಶೋಕ್ ಅವರು ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸೋಮನಹಳ್ಳಿಯ ಬಗರ್ ಹುಕುಂ ಭೂಪ್ರದೇಶದಲ್ಲಿ 8 ಎಕರೆ ಜಾಗವನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
Discussion about this post