ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಇಂದು ಹಲವೆಡೆ ದಾಳಿ ನಡೆಸಿ, ಭಾರೀ ಪ್ರಮಾಣದಲ್ಲಿ ಜಿಎಸ್‌ಟಿ ವಂಚನೆಯನ್ನು ಪತ್ತೆ ಹಚ್ಚಿದ್ದಾರೆ.
ನಕಲಿ ಬಿಲ್‌ಗಳನ್ನು ಸುಮಾರು 203 ಕೋಟಿ ರೂ.ಗಳಷ್ಟು ಭಾರೀ ಪ್ರಮಾಣದಲ್ಲಿ ವಂಚನೆ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಟಿ.ದಾಸರಹಳ್ಳಿ, ಚಿಕ್ಕಬಾಣಾವರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೇರೆ ವ್ಯಕ್ತಿಗಳ ಹೆಸರಿನಲ್ಲಿ 12 ಕಂಪೆನಿಗಳನ್ನು ನಡೆಸುತ್ತಿದ್ದ ವಿಕ್ರಮ್ ದುಗಾಲ್ ಮತ್ತು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ತನಿಖೆ ಮುಂದುವರೆದಿದೆ.
















