ಮಂಗಳೂರು: ಕರಾವಳಿಯಲ್ಲಿ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳೂರಿನಲ್ಲಿ ಚಂಡಮಾರುತ ಬೀಸುವ ಸಾಧ್ಯತೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೇ, ಇದರ ಪರಿಣಾಮ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಅಲ್ಲದೇ, ಅ.5ರ ನಾಳೆಯಿಂದ ಮಳೆ ತೀವ್ರ ಹೆಚ್ಚಾಗುವ ಸಾಧ್ಯತೆಯೂ ಸಹ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
ಚಂಡಮಾರುತದ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಮೈಕ್ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ.
Discussion about this post