ಶಿವಮೊಗ್ಗ: ಹೊರವಲಯದ ಅಬ್ಬಲಗೆರೆ ಗ್ರಾಮದಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಕಾಲೇಜಿ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಸಂಜೆ ಅಬ್ಬಲಗೆರೆ ಗ್ರಾಮ ವ್ಯಾಪ್ತಿಯಲ್ಲಿ ಮಾರುತಿ ವಿಟಾರ ಬ್ರೀಝಾ ಹಾಗೂ ಡಸ್ಟರ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಇದರ ಪರಿಣಾಮವಾಗಿ ವಿದ್ಯಾರ್ಥಿನಿ ನಿಧಿ ಎಂಬಾಕೆ ಸ್ಥಳದಲ್ಲೇ ಭೀಕರವಾಗಿ ಸಾವನ್ನಪ್ಪಿದ್ದಾಳೆ.
ಅಪಘಾತದಲ್ಲಿ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discussion about this post