ಚೆನ್ನೈ: 2014ರ ಲೋಕಸಭಾ ಚುನಾವಣೆಯ ನಂತರ ಪ್ರತಿ ಚುನಾವಣೆಯಲ್ಲೂ ಸೋತು ಸುಣ್ಣವಾಗಿ, ಐತಿಹಾಸಿಕ ಪಕ್ಷವಾಗಿದ್ದರೂ ಅಸ್ಥಿತ್ವಕ್ಕಾಗಿ ಹೆಣಗುತ್ತಿರುವ ಕಾಂಗ್ರೆಸ್ ಪಕ್ಷದ ಹುಣ್ಣು ಹೇಗಿದೆ ಎನ್ನುದಕ್ಕೆ ಕಾಂಗ್ರೆಸ್ ಹಿರಿಯ ಮುಖಂಡರೇ ಕನ್ನಡಿಯಾಗಿ ಪರಿಣಮಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಪಿ. ಚಿದಂಬರಂ ಇಂದು ಸಿಡಿಸಿರುವ ಬಾಂಬ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರುವ ಚಿದಂಬರಂ, ರಾಹುಲ್ ಗಾಂಧಿ ಸೇರಿದಂತೆ ಬೇರೆ ಯಾರನ್ನೂ ಸಹ ನಮ್ಮ ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ, ಬಿಂಬಿಸುವುದಿಲ್ಲ ಎಂದು ಹೇಳಿದ್ದು, ಪಕ್ಷಕ್ಕೆ ಹುಣ್ಣಿಗೆ ಕೈಗನ್ನಡಿಯಾಗಿದೆ ಪರಿಣಮಿಸಿದೆ.
ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ ಎಂದಿದ್ದಾರೆ.
ಇನ್ನು, ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದಿದ್ದಾರೆ.
Discussion about this post