ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹಾಗೂ ತೇಜಸ್ವಿನಿ ರಾಘವೇಂದ್ರ ರವರು ತಾಲ್ಲೂಕಿನ ಸುಪ್ರಸಿದ್ಧ ದೇವರಾದ ಶ್ರೀ ಹುಚ್ಚುರಾಯ ಸ್ವಾಮಿ ದೇವಸ್ಥಾನಕ್ಕೆ ಹಾಗೂ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಮತ ಎಣಿಕೆ ಆರಂಭವಾಗಿದ್ದು, ಶಿಕಾರಿಪುರ ತಾಲ್ಲೂಕಿನ 1ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 1984 ಮತಗಳಿಂದ ಮುಂದಿದ್ದರು.
ಕಳೆದ ಶನಿವಾರ ಉಪಚುನಾವಣೆಗೆ ಮತದಾನ ನಡೆದಿದ್ದು, ಇಂದು ಫಲಿತಾಂಶ ಪ್ರಕಟಗೊಳ್ಳಲಿದೆ.
Discussion about this post