ಬೆಂಗಳೂರು: ವಿವಾದಿತ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲೇ ಟಿಪ್ಪು ಜಯಂತಿಯನ್ನು ಆಚರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಟಿಪ್ಪು ಜಯಂತಿ ಆಚರಣೆಯ ಸ್ಥಳದ ವಿಚಾರದಲ್ಲಿ ಗೊಂದಲವಿದ್ದರೂ ಸಹ ಮೂರು ವರ್ಷಗಳಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲೇ ಆಚರಿಸಲಾಗುತ್ತಿದೆ. ಈ ಬಾರಿಯೂ ಸಹ ಅಲ್ಲೇ ಆಚರಿಸಲಾಗುತ್ತದೆ ಎಂದಿದ್ದಾರೆ.
ಹೆಚ್ಚು ಜನ ಸೇರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಟಿಪ್ಪು ಜಯಂತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಗುತ್ತದೆ ಎನ್ನಲಾಗಿತ್ತು. ಆದರೆ, ಸಚಿವ ಜಮೀರ್ ಅಹಮದ್ ಒತ್ತಡದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿಯೇ ಆಚರಿಸಲು ನಿರ್ಧರಿಸಲಾಗಿದೆ.
Mysuru to Host Hindustani Classical Vocal Concert on August 16
Kalpa Media House | MYSURU | A Hindustani classical vocal concert by renowned Gwalior gharana musician Pandit M.P. Hegde of...
Read moreDetails






