ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆದೇಶದಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ರಾಜ್ಯದಾದ್ಯಂತ ಮೂರು ದಿನ ಶೋಕಾಚರಣೆ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ವತಿಯಿಂದ ಯಾವುದೇ ರೀತಿಯ ಸಂಭ್ರಮ ಹಾಗೂ ಸಡಗರದ ಕಾರ್ಯಕ್ರಮ ನಡೆಸುವಂತಿಲ್ಲ. ಹಾಗೂ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲು ಆದೇಶಿಸಲಾಗಿದೆ.
Discussion about this post