No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನವರಾತ್ರಿಯಲ್ಲಿ ದೇವಿ ಉಪಾಸನೆಯ ಯಾಕೆ, ಹೇಗೆ?

kalpa News by kalpa News
October 13, 2018
in Special Articles
0
ನವರಾತ್ರಿಯಲ್ಲಿ ದೇವಿ ಉಪಾಸನೆಯ ಯಾಕೆ, ಹೇಗೆ?
Share on FacebookShare on TwitterShare on WhatsApp

ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀದೇವಿಯ ಉತ್ಸವ ಎಂದರೆ ನವರಾತ್ರಿ, ನವರಾತ್ರಿಯಲ್ಲಿ ಶ್ರೀದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ವದ ಲಾಭವಾಗುತ್ತದೆ.

ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ ಋತುವಿನಲ್ಲಿ ದೇವರಾತ್ರಿಗಳಿರುತ್ತವೆ. ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ.

ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ರಾತ್ರಿಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ. ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.

ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮೀಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.

ನವರಾತ್ರಿಯ ಇತಿಹಾಸ:
ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.
ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.

ನವರಾತ್ರಿಯ ಆಚರಣೆಯ ಮಹತ್ವ:
ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.

ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ 1000 ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ಶ್ರೀ ದುರ್ಗಾದೇವ್ಯೈ ನಮಃ’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.

ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ
ಅಖಂಡ ದೀಪಪ್ರಜ್ವಲನೆ ಅಂದರೆ ನವರಾತ್ರಿಯ 9 ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀದೇವಿಯ ಮಹಾತ್ಮೆಯ ಪಠಣ ಚಂಡೀಪಾಠ, ಸಪ್ತ ಶತಿಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.

ನವದುರ್ಗೆಯರು:
ಮಾರ್ಕಂಡೇಯ ಋಷಿಗಳು ಬರೆದಿರುವ ದುರ್ಗಾಸಪ್ತಶತಿ ಎಂಬ ಗ್ರಂಥವು ತಂತ್ರ ಮತ್ತು ಮಂತ್ರ ಈ ಎರಡೂ ಮಾರ್ಗಗಳಲ್ಲಿ ಪ್ರಸಿದ್ಧವಾಗಿದ್ದು ಭಾರತದಲ್ಲಿ ಇಂದು ಲಕ್ಷಾಂತರ ಜನರು ಸಪ್ತಶತಿಯ ಪಠಣ ಮಾಡುತ್ತಿರುವುದು ಕಂಡುಬರುತ್ತದೆ. ಭಗವಾನ ಹಿರಣ್ಯಗರ್ಭ ಮುನಿಗಳು ಮಂತ್ರಯೋಗ ಸಮೀಕ್ಷೆಯಲ್ಲಿ ಹೇಳಿರುವ ಶ್ರೀದುರ್ಗಾಸಪ್ತಶತಿಯಲ್ಲಿನ ದೇವಿಯ ಹೆಸರುಗಳ ಶಾಸ್ತ್ರೀಯ ಅರ್ಥ ಮತ್ತು ಇಂದಿನ ಭೌತಿಕ ವಿಜ್ಞಾನವು ಮಾಡಿರುವ ಪ್ರಗತಿಯ ಬಗ್ಗೆ ಇಲ್ಲಿ ನಾವು ವಿಚಾರ ಮಾಡೋಣ.

1. ಶೈಲಪುತ್ರಿ:

ಶೈಲಮ್’ ಅಂದರೆ ಯಾವ ಪರ್ವತದಲ್ಲಿ ಮಾಣಿಕ್ಯ, ರತ್ನ ಮತ್ತಿತರ ಅತ್ಯಮೂಲ್ಯ ವಸ್ತುಗಳ ಸಂಗ್ರಹವಿದೆಯೋ, ಅಂತಹ ಪರ್ವತ. ಈ ಅತ್ಯಮೂಲ್ಯ ವಸ್ತುಗಳ ಸಂಗ್ರಹವನ್ನು ನೋಡಿಯೂ ಭೌತಿಕ ಸುಖದೆಡೆಗೆ ಆಕರ್ಷಿತಗೊಳ್ಳದೆ, ಭೌತಿಕತೆಯ ತ್ಯಾಗವನ್ನು ಮಾಡಿ ಆತ್ಮಜ್ಞಾನವನ್ನು ಪಡೆಯಲು ಪ್ರವೃತ್ತವಾಗುವವಳೆಂದರೆ ಶೈಲಪುತ್ರಿ.

2. ಬ್ರಹ್ಮಚಾರಿಣಿ:

ಬ್ರಹ್ಮಚಾರಯಿತುಂ ಶೀಲಂ ಯಸ್ಯಾಃ ಸಾ ಬ್ರಹ್ಮಚಾರಿಣಿ’ ಅಂದರೆ ಬ್ರಹ್ಮರೂಪವಾಗುವುದು ಯಾರ ಶೀಲವಾಗಿದೆಯೋ ಮತ್ತು ಯಾರ ಆಚಾರಗಳು ಅದರಂತಿವೆಯೋ ಅವಳೇ ಬ್ರಹ್ಮಚಾರಿಣಿ.

3. ಚಂದ್ರಘಂಟಾ:

ಚಂದ್ರಃ ಘಂಟಾಯಾಂ ಯಸ್ಯಾ ಸಾ ಚಂದ್ರಘಂಟಾ ಆಹ್ಲಾದಯತಿ ಇತಿ ಚಂದ್ರಃ’ ಅಂದರೆ ಆಹ್ಲಾದಕಾರಕ ಚಂದ್ರನು ಯಾರ ದ್ವಾರದಲ್ಲಿ ಸ್ಥಿರವಾಗಿದ್ದಾನೆಯೋ ಅವಳೇ ಚಂದ್ರಘಂಟಾ. ಆಹ್ಲಾದವೆಂದರೆ ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ ಈ ಮೂರೂ ಗುಣಗಳ ಸಮ್ಮಿಲಿತ ಸ್ಥಿತಿ.

4. ಕೂಷ್ಮಾಂಡಾ:

ಕುತ್ಸಿತಃ ಉಷ್ಮಾಃ ಕೂಷ್ಮಾಃ’ ಕುತ್ಸಿತಃ ಅಂದರೆ ಸಹಿಸಲು ಕಠಿಣ ವಾದುದು. ಉಷ್ಮಾ ಎಂದರೆ ಸೂಕ್ಷ್ಮ ಲಹರಿಗಳ ಗೊಂದಲ (ಧ್ವನಿ). ತ್ರಿವಿಧತಾಪಯುಕ್ತಃ ಸಂಸಾರಃ ಸ ಅಂಡೇ ಮಾಂಸಪೇಶ್ಯಾಮ್ ಉದರರೂಪಾಯಾಂ ಯಸಾಃ ಸಾ ಕೂಷ್ಮಾಂಡಾ’ ಇದರ ಅರ್ಥವು ಹೀಗಿದೆ ? ತ್ರಿವಿಧತಾಪಗಳೆಂದರೆ ಉತ್ಪತ್ತಿ (ಜನ್ಮ), ಸ್ಥಿತಿ (ಬೆಳವಣಿಗೆ) ಮತ್ತು ಲಯ (ಮೃತ್ಯು). ಮೃತ್ಯು (ಮೋಕ್ಷ) ಅಂದರೆ ಅನಿಶ್ಚಿತ ಕಾಲಾವಧಿಯ ವರೆಗೆ ವಿಶಿಷ್ಟ ಪದ್ಧತಿಯಿಂದ ನಾಶವಾಗುವುದು’. ಸಂಸಾರ’ವೆಂದರೆ ಪುನಃಪುನಃ’ ಮತ್ತು ಅಂಡಃ’ ಅಂದರೆ ವಿಶಿಷ್ಟ ನಿಯಂತ್ರಣದಿಂದ ಯುಕ್ತವಾಗಿರುವ ಕೋಶ.’ ಮಾಂಸ, ಜೀವಕೋಶಗಳು, ಉದರ ಮತ್ತು ರೂಪ ಇವುಗಳಿಂದ ಯುಕ್ತಸಂಪನ್ನವಾದ ಜೀವಗಳು ಈ ಕೋಶದಲ್ಲಿ ತ್ರಿವಿಧ ತಾಪಗಳ ಪುನರಾವೃತ್ತಿಯ ಅವಸ್ಥೆಯಿಂದ ಪುನಃಪುನಃ ಹೋಗುತ್ತಾರೆ. ಈ ಪ್ರಕ್ರಿಯೆಯಿಂದ ಬಿಡುಗಡೆ ಹೊಂದಲು ಯಾರ ಕೃಪೆಯ ಆವಶ್ಯಕತೆಯಿದೆಯೋ ಅವಳೇ ಕೂಷ್ಮಾಂಡಾ.

5. ಸ್ಕಂದಮಾತಾ:

ಭಗಃ’ ಎಂದರೆ ತೇಜಸ್ಸು. ಭಗವತಿ’ ಎಂದರೆ ವಿಶಿಷ್ಟ ಯೋಗ್ಯತೆ ಯುಳ್ಳ ಸ್ಪಂದನ ಲಹರಿಗಳಿಂದ ಯುಕ್ತವಾದಂತಹ ತೇಜಸ್ಸು’. ಬ್ರಹ್ಮದೇವ ಮತ್ತು ಭಗವತಿ ದೇವಿಯ ಸಮ್ಮಿಲಿತ ಅವಸ್ಥೆಯಿಂದ ಸನತ್ಕುಮಾರ ಅಥವಾ ಸ್ಕಂದ ಎಂಬ ಹೆಸರಿನ ವಿಶಿಷ್ಟ ರಚನೆಯ ಕಿರಣ ಸಮೂಹವು ಉತ್ಪನ್ನವಾಯಿತು. ಭೂಲೋಕದಿಂದ ಸತ್ಯಲೋಕದ ವರೆಗಿನ ಲೋಕಗಳನ್ನು ಸ್ಕಂದರೇಷೆ’ ಎನ್ನುತ್ತಾರೆ. ಭೂಲೋಕದಿಂದ ಸತ್ಯಲೋಕದವರೆಗಿನ ವ್ಯಾಹ್ಯತಿಗಳ ಮೇಲೆ ಸ್ಕಂದರೇಷೆಯ ನಿಯಂತ್ರಣವಿದೆ. ವ್ಯಾಹ್ಯತಿ ಅಂದರೆ ಗೂಢ ಸ್ವರ ಅಥವಾ ಮಂತ್ರ. ಸಪ್ತಲೋಕಗಳ ಹೆಸರುಗಳಂತೆ ಅನುಕ್ರಮವಾಗಿ ಭೂಃ, ಭುವಃ, ಸ್ವಃ, ಮಹಃ, ಜನಃ, ತಪಃ ಮತ್ತು ಸತ್ಯ ಇವು ಏಳು ವ್ಯಾಹ್ಯತಿಗಳಾಗಿವೆ. ಈ ಏಳೂ ಲೋಕಗಳ ನಿಯಂತ್ರಕರ ಮಾತೆಯೇ ಸ್ಕಂದಮಾತೆ. ಈ ಏಳೂ ಲೋಕಗಳಿಂದ ಪಾರಾಗಿ ಹೋಗಲು ಯಾರ ಸಹಾಯ ಬೇಕಾಗುತ್ತದೆಯೋ ಅವಳಿಗೆ ಸ್ಕಂದಮಾತೆ ಎನ್ನುತ್ತಾರೆ.

6. ಕಾತ್ಯಾಯನಿ:

ಕಾತ್ಯಾಯನಸ್ಯ ಅಪತ್ಯಂ ಸ್ತ್ರೀ ಕಾತ್ಯಾಯನಿ’ (ಕಾತ್ಯಾಯನನ ಮಗಳು ಕಾತ್ಯಾಯನಿ) ಅಯನ’ ಎಂದರೆ ಹಲವಾರು ನಕ್ಷತ್ರ ಸಮೂಹಗಳಿಂದ ಯುಕ್ತವಾಗಿರುವ ಭಾಗ’. ಕಾತ್ಯಾಯನ ಋಷಿಗಳು ಇಂತಹ ಒಂದು ಅಯನದ ಪಾಲಕರಾಗಿದ್ದರು. ಒಮ್ಮೆ ಕಾತ್ಯಾಯನರ ಅಯನಗಳಲ್ಲಿನ ದೇವತೆಗಳ ಮೇಲೆ (ತೇಜಸ್ಸಿನ ಮೇಲೆ) ಅವರದ್ದೇ ಅಯನದಲ್ಲಿನ ಅಯೋಗ್ಯ ಸ್ಪಂದನಲಹರಿಗಳ ಒಂದು ಶಕ್ತಿಯುತ ಸಮೂಹವು ಆಕ್ರಮಣ ಮಾಡಿತು.

ಘರ್ಷಣೆಯಿಂದ ಬಹುದೊಡ್ಡ ಉತ್ಪಾತವಾಗುವ ಸಮಯ ಬಂದಿತು. ಆಗ ಕಾತ್ಯಾಯನ ಋಷಿಗಳ ಆಶ್ರಮದಲ್ಲಿ ಸೂಕ್ಷ್ಮಾತಿಸೂಕ್ಷ್ಮ ಶಕ್ತಿಲಹರಿಗಳ ಒಂದು ಅಂಶವು ಒಬ್ಬ ಚಿಕ್ಕ ಬಾಲಕಿಯ ಆಕಾರದಲ್ಲಿ ಪ್ರವೇಶಿಸಿತು. ಈ ಬಾಲಕಿಯನ್ನು ಕಾತ್ಯಾಯನ ಋಷಿಗಳು ತಮ್ಮ ಸಂತಾನವೆಂದು ಪರಿಗಣಿಸಿದರು; ಆದುದರಿಂದ ಅವಳು ಕಾತ್ಯಾಯನಿ’ ಎಂಬ ಹೆಸರಿನಿಂದ ಪ್ರಸಿದ್ಧಿ ಹೊಂದಿದಳು. ಕಾತ್ಯಾಯನಿಯು ಶಕ್ತಿಯುತ ಅಯೋಗ್ಯ ಸ್ಪಂದನಲಹರಿಗಳನ್ನು ಯೋಗ್ಯ ಸ್ಪಂದನಲಹರಿಗಳನ್ನಾಗಿ ಪರಿವರ್ತಿಸಿ ದೇವತೆಗಳಿಗೆ (ತೇಜಸ್ಸಿಗೆ) ಸಹಾಯ ಮಾಡಿದಳು.

7. ಕಾಳರಾತ್ರಿ:

ಹಲವಾರು ಅಯೋಗ್ಯ ಸ್ಪಂದನಲಹರಿಗಳು ಒಟ್ಟು ಸೇರಿ ಸಿದ್ಧವಾಗುವ ಶಕ್ತಿಯೆಂದರೆ ಕಾಲ’. ವ್ಯಕ್ತಿಯ (ಅಥವಾ ಪ್ರಾಣಿಗಳ) ಅಯೋಗ್ಯ ಸ್ಪಂದನಲಹರಿಗಳು ಆ ವ್ಯಕ್ತಿಯಲ್ಲಿ ಭಯವನ್ನುಂಟು ಮಾಡುತ್ತವೆ. ಆ ಸ್ಪಂದನಲಹರಿಗಳಲ್ಲಿ ವಿಶಿಷ್ಟ ಕ್ಷಮತೆ ಉಂಟಾಯಿತೆಂದರೆ ವಾತಾವರಣದಲ್ಲಿನ ಇದೇ ಜಾತಿಯ ಇತರ ಸ್ಪಂದನಗಳನ್ನು ವ್ಯಕ್ತಿಯ (ಅಥವಾ ಆ ಪ್ರಾಣಿಯ) ಶರೀರದೆಡೆ ಆಕರ್ಷಿಸುತ್ತವೆ. ಈ ರೀತಿ ಅಯೋಗ್ಯ ಸ್ಪಂದನಲಹರಿಗಳ ಶಕ್ತಿಯು ಹೆಚ್ಚಾಯಿತೆಂದರೆ ಆಗಬಾರದಂತಹ ಘಟನೆಗಳು ಮತ್ತು ಕೃತಿಗಳು ಆ ವ್ಯಕ್ತಿಯಿಂದ ಆಗುತ್ತವೆ.

ಅವುಗಳ ಪ್ರತಿಕ್ರಿಯೆಗಳನ್ನು ನಾವು ಆಪತ್ತು ಅಥವಾ ಸಂಕಟ ಎನ್ನುತ್ತೇವೆ. ಇಂತಹ ಆಪತ್ತನ್ನು ಅಥವಾ ಸಂಕಟವನ್ನು ತರುವ ಅಯೋಗ್ಯ ಸ್ಪಂದನಲಹರಿಗಳ ಸಾಮೂಹಿಕ ಶಕ್ತಿಯ, ಅಂದರೆ ಕಾಲದ ರಾತ್ರಿಯೇ (ಅಂದರೆ ವಿನಾಶಿಕಾ ಅರ್ಥಾತ್ ವಿನಾಶ ಮಾಡುವವಳು) ಕಾಳರಾತ್ರಿ’. ವಿನಾಶಿಕಾ’ ಅಂದರೆ ವಿಶೇಷೇಣ ನಾಶಯತಿ ಇತಿ’ (ಸಂಪೂರ್ಣವಾಗಿ ನಾಶ ಮಾಡುವವಳು). ವಿಶೇಷ’ ಎಂದರೆ ವಿಗತಃ ಶೇಷಃ ಯಸ್ಮಾತ್‌’ (ವಿಶಿಷ್ಟ) ಶೇಷವೂ ಇಲ್ಲದಂತೆ ನಾಶ ಮಾಡುವುದು.

8. ಮಹಾಗೌರಿ:

ತಪಸ್ಯೇನೆ ಮಹಾನ್ ಗೌರಃ’, ಅಂದರೆ ತೇಜಸ್ಸ’ನ್ನು ಪ್ರಾಪ್ತಮಾಡಿ ಕೊಂಡವಳೇ ಮಹಾಗೌರಿ’. ಮಂತ್ರಯೋಗಸಮಿಕ್ಷೆಯಲ್ಲಿ ಸಮಾಧಿ’ ಎಂಬ ಪದದ ವ್ಯುತ್ಪತ್ತಿಯನ್ನು ಸಮ್ + ಆ + ಅಧಿ’ ಎಂದು ಹೇಳಲಾಗಿದೆ. ಸಮ್’ ಅಂದರೆ ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳ ಸಮ್ಯಕ್, ಆ’ ಅಂದರೆ ವರೆಗೆ’ ಮತ್ತು ಧಿ’ ಅಂದರೆ ಮಾನವನ ಶರೀರದಿಂದ ನಿರಂತರವಾಗಿ ಉತ್ಸರ್ಜಿತಗೊಳ್ಳುವ ಸ್ಪಂದನಲಹರಿಗಳು’. ಧೀ ಎಂಬ ಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮಶಕ್ತಿ ಲಹರಿಗಳ ಸಮ್ಯಕ್ ಅವಸ್ಥೆಯ ತನಕ ಕೊಂಡೊಯ್ಯುವ ಪ್ರಕ್ರಿಯೆಯನ್ನು ಸಮಾಧಿ ಎನ್ನುತ್ತಾರೆ.

ಈ ರೀತಿ ಪುನಃ ಪುನಃ ಸಮಾಧಿಯನ್ನು ಸಾಧಿಸುವುದಕ್ಕೆ ತಪಸ್ಯಾ’ ಎನ್ನುತ್ತಾರೆ. ಇಂತಹ ತಪಸ್ಸನ್ನು ವಿಶಿಷ್ಟ ಕಾಲಾವಧಿಯ ತನಕ ಮಾಡುವುದರಿಂದ ಗೌರ’ ಅಥವಾ ತೇಜಸ್ಸು’ ಪ್ರಾಪ್ತವಾಗುತ್ತದೆ. ಇಂತಹ ತೇಜಸ್ಸಿನ ಅತ್ಯುಚ್ಚ ತೇಜಸ್ಸನ್ನು ಅಂದರೆ ಮಹಾನ್ ಗೌರವನ್ನು ಯಾವಳು ಪಡೆದುಕೊಂಡಿದ್ದಾಳೆಯೋ ಅವಳು ಮತ್ತು ಯಾರ ಪ್ರಸಾದದಿಂದ ಸಮಾಧಿಯನ್ನು ಸಾಧಿಸಬಹುದೋ ಅವಳೇ ಮಹಾಗೌರಿ’.

9. ಸಿದ್ಧಿದಾತ್ರಿ:

ಸಾಮಾನ್ಯ ಸ್ಪಂದನಲಹರಿಗಳನ್ನು ಸೂಕ್ಷ್ಮಾತಿಸೂಕ್ಷ್ಮ ಶಕ್ತಿತರಂಗಗಳಲ್ಲಿ ಶಾಶ್ವತವಾಗಿ ಸೇರಿಸುವುದಕ್ಕೆ ಮೋಕ್ಷ ಅಥವಾ ಸಿದ್ಧಿ’ ಎನ್ನುತ್ತಾರೆ. ಸಿದ್ಧಿಯನ್ನು ನೀಡುವವಳು ಸಿದ್ಧಿದಾತ್ರಿ.’

ಆಯುಧಪೂಜೆ (ಶಸ್ತ್ರಪೂಜೆ) ಅಂದರೆ ಏನು?:
ಈ ದಿನ ರಾಜರು, ಸಾಮಂತರು, ಸರದಾರರು ತಮ್ಮತಮ್ಮ ಶಸ್ತ್ರಗಳನ್ನು ಸ್ವಚ್ಛಗೊಳಿಸಿ, ಸಾಲಾಗಿ ಇಟ್ಟು ಪೂಜೆ ಮಾಡುತ್ತಾರೆ. ಹಾಗೆಯೇ ರೈತರು ಮತ್ತು ಕುಶಲ ಕರ್ಮಿಗಳು ತಮ್ಮತಮ್ಮ ಶಸ್ತ್ರಗಳ ಪೂಜೆಯನ್ನು ಮಾಡುತ್ತಾರೆ. ಕೆಲವರು ಈ ಪೂಜೆಯನ್ನು ನವಮಿಯಂದೂ ಮಾಡುತ್ತಾರೆ.
ಭಕ್ತಿ ಶ್ರದ್ಧೆಯಿಂದ ಶ್ರೀದುರ್ಗಾದೇವಿಯ ಉಪಾಸನೆಯನ್ನು ಮಾಡಿ ಶ್ರೀ ದೇವಿಯ ಕೃಪೆಯನ್ನು ಪಡೆಯೋಣ.

-ಹಿಂದೂ ಜನಜಾಗೃತಿ ಸಮಿತಿ

Tags: hindu janajagruti samitiNavaratri 2018ಕಾತ್ಯಾಯನಿಕಾಳರಾತ್ರಿಕೂಷ್ಮಾಂಡಾಚಂದ್ರಘಂಟಾಬ್ರಹ್ಮಚಾರಿಣಿಮಹಾಗೌರಿಶೈಲಪುತ್ರಿಸಿದ್ಧಿದಾತ್ರಿಸ್ಕಂದಮಾತಾ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಅವರಿಗೆ ನಾಳೆ ಅಭಿನಂದನೆ

Next Post

ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

kalpa News

kalpa News

Next Post
ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

ಭದ್ರಾವತಿ: ಮಣಿಪಾಲ ಆಸ್ಪತ್ರೆಯಲ್ಲಿ ಇಎಸ್‌ಐ ಚಿಕಿತ್ಸೆ ಮತ್ತೆ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL