ಮೈಸೂರು: ವಿಶ್ವದಲ್ಲೇ ಖ್ಯಾತಿ ಪಡೆದ ಮೈಸೂರು ದಸರಾದ ಪ್ರಮುಖ ಘಟ್ಟ ವಿಜಯದಶಮಿ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಹಠಾತ್ ಸೂತಕ ಆವರಿಸಿದೆ.
ಮೈಸೂರು ಒಡೆಯರ್ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮಣಿ (98) ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದು, ಈ ಹಿನ್ನೆಲೆಯಲ್ಲಿ ಸಂಭ್ರಮದಲ್ಲಿದ್ದ ಅರಮನೆಯಲ್ಲಿ ದುಃಖ ಮಡುಗಟ್ಟಿದೆ.
ಚಿನ್ನಮಣಿ ಅವರ ನಿಧನದ ಹಿನ್ನೆಲೆಯಲ್ಲಿ ದಸರಾ ನಿಮಿತ್ತ ಅರಮನೆಯಲ್ಲಿ ನಡೆಯಬೇಕಿದ್ದ ಕೆಲವು ಧಾರ್ಮಿಕ ವಿಧಿವಿಧಾನಗಳನ್ನು ಮೊಟಕುಗೊಳಿಸಲಾಗಿದ್ದು, ಮೂರು ದಿನಗಳ ಕಾಲ ಯಾವುದೇ ಪೂಜಾ ವಿಧಿ ವಿಧಾನಗಳನ್ನು ನಡೆಸಲಾಗುತ್ತಿಲ್ಲ ಎಂದು ತಿಳಿದುಬಂದಿದೆ.
ಭುವನೇಶ್ವರಿ ದೇವಾಲಯದ ಆವರಣದಲ್ಲಿರುವ ಬನ್ನಿ ಮಂಟಪಕ್ಕೆ ಯದುವೀರ್ ಒಡೆಯರ್ ಅವರು ಪೂಜೆ ಸಲ್ಲಿಸಬೇಕಿತ್ತು. ಉತ್ತರ ಪೂಜೆಯನ್ನು ಸ್ಥಗಿತಗೊಳಿಸಲಾಗಿದೆ.
ಇನ್ನು, ಪುಟ್ಟ ಚಿನ್ನಮಣಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಮಾತೃಶ್ರೀ ಪುಟ್ಟಚಿನ್ನಮ್ಮಣ್ಣಿ ನಿಧನದ ಸುದ್ದಿ ಕೇಳಿ ದುಖ: ಉಂಟಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.
ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
— CM of Karnataka (@CMofKarnataka) October 19, 2018
Discussion about this post