ನವದೆಹಲಿ: ಐಎಎಸ್, ಐಪಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯ ವಯೋಮಿತಿ ಮಾಡುವ ಯಾವುದೇ ರೀತಿಯ ಪ್ರಸ್ತಾವನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಈ ಕುರಿತಂತೆ ಸ್ಪಸ್ಪ್ಟೀಕರಣ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಯುಪಿಎಸ್‌ಸಿ ಪರೀಕ್ಷಾರ್ಥಿಗಳ ವಯಸ್ಸಿನ ಮಿತಿ 32 ವರ್ಷ ಇದೆ. ಅದನ್ನು 27ಕ್ಕೆ ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಇದು ಕೇವಲ ವದಂತಿ ಅಷ್ಟೇ. ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಸಾಮಾನ್ಯ ವರ್ಗದವರಿಗೆ 32 ವರ್ಷಗಳು ಮತ್ತು ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 37 ವರ್ಷಗಳ ಗರಿಷ್ಠ ಮಿತಿಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ.
Discussion about this post