ಬೆಂಗಳೂರು: ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರದಲ್ಲಿ ನಾನು ಹೇಳಿದ್ದನ್ನೇ ಹೇಳಕೊಂಡು ಬರುತ್ತಿದ್ದೇನೆ. ಹೀಗಾಗಿ, ಸ್ಮಾರಕ ನಿರ್ಮಾಣ ಆಗುವವರೆಗೂ ನಾನು ಈ ವಿಚಾರದಲ್ಲಿ ಮಾತನಾಡುವುದಿಲ್ಲ ಎಂದು ಹಿರಿಯ ನಟಿ ಭಾರತಿ ವಿಷ್ಣವರ್ಧನ್ ಹೇಳಿದ್ದಾರೆ.
ಈ ಕುರಿತಂತೆ ಇಂದು ಮಾತನಾಡಿರುವ ಅವರು, ಸ್ಮಾರಕ ನಿರ್ಮಾಣಕ್ಕಾಗಿ ನಾವು ಕಾಯುತ್ತಿದ್ದೇವೆ. ಹಾಗೆಯೇ ಅಭಿಮಾನಿಗಳೂ ಸಹ ಕಾಯುತ್ತಿದ್ದಾರೆ ಎಂದಿದ್ದಾರೆ.
ಇನ್ನು, ವಿಷ್ಣುವರ್ಧನ್ ಸ್ಮಾರಕ ಅಭಿಮಾನ್ ಸ್ಟುಡಿಯೋದಲ್ಲೇ ನಿರ್ಮಾಣ ಮಾಡಬೇಕು ಎಂದು ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಭಿಮಾನ್ ಸ್ಟುಡಿಯೋ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅಭಿಮಾನಿಗಳು ವಿಷ್ಣು ಸ್ಮಾರಕ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಕಿಡಿ ಕಾರಿದ್ದು, ಮುಂದಿನ ಸೆ.18ರ ಒಳಗಾಗಿ ಸ್ಮಾರಕ ನಿರ್ಮಾಣವಾಗಲೇಬೇಕು ಎಂದು ಆಗ್ರಹಿಸಿದ್ದಾರೆ.
Discussion about this post