ಕುಂದಾಪುರ: ಅನಾರೋಗ್ಯದಿಂದ ನಿಧನರಾದ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಇಡಿಯ ಪೊಲೀಸ್ ಇಲಾಖೆ ಕಣ್ಣೀರು ಹಾಕಿದೆ.
ಮಧುಕರ್ ಹುಟ್ಟೂರಾದ ಯಡಾಡಿ ಮತ್ಯಾಡಿಯ ಫಾರ್ಮ್ ಹೌಸ್‌ನಲ್ಲಿ ಇಂದು ಸಕಲ ಸರಕಾರಿ ಗೌರಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ನೆರೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಬಿಕ್ಕಿ ಬಿಕ್ಕಿ ಅತ್ತರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದ ನಂತರ ಮಧುಕರ್ ಸಹೋದರ ಮುರಳಿ ಅಂತಿಮ ವಿಧಿವಿಧಾನ ನೆರವೇರಿಸಿದರು.
ಜಿಲ್ಲಾಡಳಿತ ಅಂತ್ಯಕ್ರಿಯೆ ಸಕಲ ವ್ಯವಸ್ಥೆಗಳನ್ನು ಮಾಡಿತ್ತು.ಸಚಿವ ಯು.ಟಿ. ಖಾದರ್, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.

















