ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬರೋಬ್ಬರಿ ಎಂಟು ನಟ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಇಡಿಯ ಸ್ಯಾಂಡಲ್ ವುಡ್ ಶಾಕ್ ಆಗಿದೆ.
ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಟ ಪುನೀತ್ ರಾಜ್‌ಕುಮಾರ್, ಶಿವರಾಜ್ ಕುಮಾರ್, ಸುದೀಪ್, ಯಶ್, ಕೆಜಿಎಫ್ ಖ್ಯಾತಿಯ ವಿಜಯ್ ಕಿರಗಂದೂರು, ನಿರ್ಮಾಪಕ ಜಯಣ್ಣ ಹಾಗೂ ಸೇರಿ ಹಲವು ಕಲಾವಿದರ ಮನೆ ಎಂಟು ದಿಗ್ಗಜರ ನಿವಾಸಗಳ ಮೇಲೆ ದಾಳಿ ನಡೆದಿದೆ.
25 ಕ್ಕೂ ಹೆಚ್ಚು ಕಡೆ ಖಾಸಗಿ ವಾಹನಗಳಲ್ಲಿ ತೆರಳಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾಲಕ್ಷ್ಮೀ ಲೇಔಟ್‌ನಲ್ಲಿ ರುವ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ನಿವಾಸ, ಸದಾಶಿವ ನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಅವರ ನಿವಾಸ, ಕತ್ರಿಗುಪ್ಪೆಯಲ್ಲಿರುವ ನಟ ಯಶ್ ನಿವಾಸ, ಸುದೀಪ್ ಅವರ ಜೆಪಿ ನಗರ ನಿವಾಸ, ವಿಜಯ್ ಕಿರಗಂದೂರು ಅವರ ನಾಗರಬಾವಿಯಲ್ಲಿರುವ ನಿವಾಸ, ಶಿವರಾಜ್ ಕುಮಾರ್ ಅವರ ಮಾನ್ಯತಾ ಟೆಕ್ ಪಾರ್ಕ್ ಬಳಿಯಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

















