ನವದೆಹಲಿ: ದೇಶದ ಕುತೂಹಲ ಕೆರಳಿಸಿದ್ದ ಸಿಬಿಐ ನಿರ್ದೇಶಕರ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅಲೋಕ್ ವರ್ಮಾ ಅವರನ್ನೇ ಮುಂದುವರೆಸುವಂತೆ ಆದೇಶಿಸಿದೆ.
ಈ ಕುರಿತಂತೆ ತೀರ್ಪು ಪ್ರಕಟಿಸಿರುವ ನ್ಯಾಯಾಧೀಶ ಸಂಜಯ್ ಕಿಶನ್ ಕೌಲ್ ಅವರಿದ್ದ ಪೀಠ ತೀರ್ಪು ಪ್ರಕಟವಾಗಿದ್ದು, ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ನ್ಯಾಯಾಲಯ ತಿಳಿಸಿದೆ.
ತಮ್ಮ ಅಧಿಕಾರಕ್ಕೆ ಕತ್ತರಿ ಹಾಕಿ ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಕಡ್ಡಾಯ ರಜೆ ಮೇಲೆ ಅಲೋಕ್ ವರ್ಮಾವನ್ನು ಕಳುಹಿಸಿರುವ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಹೇಳಿದೆ.
ಹುದ್ದೆಯಿಂದ ಕೆಳಗಿಳಿಸುವ ಮುನ್ನ ಸಿಜೆಐ, ಪ್ರಧಾನಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಕೇಂದ್ರ ಚರ್ಚೆ ನಡೆಸಬೇಕಿತ್ತು ಎಂದು ಹೇಳಿರುವ ನ್ಯಾಯಾಲಯ, ಕೇಂದ್ರ ಸರ್ಕಾರದ ಆದೇಶವನ್ನು ತಿರಸ್ಕರಿಸಿ ಮತ್ತೆ ಸಿಬಿಐ ನಿರ್ದೇಶಕ ಹುದ್ದೆಯಲ್ಲಿ ಮುಂದುವರೆಯುವಂತೆ ಅಲೋಕ್ ವರ್ಮಾ ಅವರಿಗೆ ಸೂಚಿದೆ. ಅಲ್ಲದೆ, ಸದ್ಯಕ್ಕೆ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ ಎಂದು ತಿಳಿಸಿದೆ.
ಹಿಂದಿನ, ವಿಚಾರಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ಸಿಬಿಐನ ಇಬ್ಬರು ಅಧಿಕಾರಿಗಳ ನಡುವಿನ ಸಂಘರ್ಷ ರಾತ್ರೋರಾತ್ರಿ ಉದ್ಭವಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಪ್ರಶ್ನಿಸಿತ್ತು. ಜುಲೈ ನಂತರ ಈ ಸಂಘರ್ಷ ನಡೆಯುತ್ತಿದ್ದಲ್ಲಿ ಅಲೋಕ್ ವರ್ಮಾ ಅವರನ್ನು ತೆಗೆಯುವ ಮೊದಲು ಆಯ್ಕೆ ಸಮಿತಿಯನ್ನು ಏಕೆ ಪರಿಗಣಿಸಲಿಲ್ಲ? ಅಲೋಕ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸುವ ಮೊದಲು ಆಯ್ಕೆ ಸಮಿತಿಯೊಂದಿಗೆ ಮಾತನಾಡಲು ಇರುವ ಸಮಸ್ಯೆಯೇನು? ಅಕ್ಟೋಬರ್ ೨೩ ರಂದು ರಾತ್ರೋ ರಾತ್ರಿ ಈ ನಿರ್ಧಾರ ಕೈಗೊಳ್ಳಲು ಕಾರಣವೇನು? ಹೀಗೆ ಸುಪ್ರೀಂಕೋರ್ಟ್ ಪ್ರಶ್ನೆಗಳ ಸುರಿಮಳೆ ಗೈದಿತ್ತು.
Discussion about this post