ನವದೆಹಲಿ: ಕಾಂಗ್ರೆಸ್ ಕಾರ್ಯಕರ್ತ ಒತ್ತಡಕ್ಕೆ ಮಣಿದಿರುವ ಎಐಸಿಸಿ, ಪ್ರಿಯಾಂಕಾ ವಾದ್ರಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತಂದಿದ್ದು, ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ.
ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಳೆದು, ಪ್ರಿಯಾಂಕಾಗೆ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆಯೊಂದನ್ನು ನೀಡಲಾಗಿದೆ.
ಪೂರ್ವ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಹೊಣೆ ಹೊತ್ತ ಪ್ರಿಯಾಂಕಾ ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಸಹ ಪ್ರಚಾರ ಕಾರ್ಯ ನಡೆಸಲಿದ್ದಾರೆ.
ಕೆ.ಸಿ. ವೇಣುಗೋಪಾಲ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದಲ್ಲದೆ ಜೋತಿರಾದಿತ್ಯ ಸಿಂಧಿಯಾ ಅವರನ್ನು ಉತ್ತರ ಪ್ರದೇಶ ಪಶ್ಚಿಮ ವಿಭಾಗದ ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಯನ್ನಾಗಿಯೂ ಗುಲಾಂ ನಬಿ ಆಜಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿಯೂ ನೇಮಕ ಮಾಡಲಾಗಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು 46 ಸಂಸತ್ ಕ್ಷೇತ್ರಗಳಲ್ಲಿ ಪ್ರಚಾರಾಭಿಯಾನ ನಡೆಸಿದ್ದರು. ಆದರೆ ಕಾಂಗ್ರೆಸ್ ಈ ಪೈಕಿ ಗೆದ್ದದ್ದು ಎರಡು ಸೀಟಗಳನ್ನು ಮಾತ್ರ. ಪ್ರಿಯಾಂಕಾ ಅವರನ್ನು ಉತ್ತರ ಪ್ರದೇಶದ ಕಾಂಗ್ರೆಸ್ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವುದು ವಂಶ ರಾಜಕಾರಣದಲ್ಲಿ ನಂಬಿಕೆ ಇರುವ ಪಕ್ಷದ ಪದಾಧಿಕಾರಿಗಳ ಮೇಲೆ ಮಾತ್ರವೇ ಪ್ರಭಾವ ಬೀರಬಹುದು ಎಂದು ಪಾತ್ರ ಹೇಳಿದರು.







Discussion about this post