ರಾಕ್‌ಲೈನ್ ಎಂಟರ್‌ಟೈನ್‌ಮೆಂಟ್ ಪ್ರೈ ಲಿ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸಿರುವ, ಪವರ್‌ಸ್ಟಾರ್ ಪುನೀತ್ ರಾಜಕುಮಾರ್ ನಾಯಕರಾಗಿ ನಟಿಸಿರುವ `ನಟಸಾರ್ವಭೌಮ` ಚಿತ್ರ ನಾಳೆ ರಾಜ್ಯದಾದ್ಯಂತ ತೆರೆಗೆ ಅಪ್ಪಳಿಸಲು ಸಿದ್ದವಾಗಿದೆ.
ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಡಿ.ಇಮ್ಮಾನ್ ಅವರ ಸಂಗೀತ ನಿರ್ದೇಶನವಿದೆ.
ವೈದಿ ಎಸ್ ಛಾಯಾಗ್ರಹಣ, ಮಹೇಶ್ ರೆಡ್ಡಿ, ಸಂಕಲನ, ಪೀಟರ್ ಹೆನ್ ಸಾಹಸ ನಿರ್ದೇಶನ, ಜಾನಿ, ಭೂಷಣ್ ನೃತ್ಯ ನಿರ್ದೇಶನ ಹಾಗೂ ಭೂಪತಿ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪುನೀತ್ ರಾಜಕುಮಾರ್, ರಚಿತಾರಾಂ, ಅನುಪಮ ಪರಮೇಶ್ವರನ್, ಸಾಧುಕೋಕಿಲ, ರವಿಶಂಕರ್, ಚಿಕ್ಕಣ್ಣ, ಶ್ರೀನಿವಾಸಮೂರ್ತಿ, ಪ್ರಭಾಕರ್(ಬಾಹುಬಲಿ) ಮುಂತಾದವರಿದ್ದಾರೆ.
ಇನ್ನು ಬೆಂಗಳೂರಿನ ಪ್ರಸನ್ನ ಥಿಯೇಟರ್ ನಲ್ಲಿ ಹತ್ತುಗಂಟೆಗೆ ಹಾಗೂ ಶ್ರೀನಿವಾಸ, ಊರ್ವಶಿ ಚಿತ್ರಮಂದಿರದಲ್ಲಿ ರಾತ್ರಿ 12.30ಕ್ಕೆ ಚಿತ್ರ ಬಿಡುಗಡೆಗೊಳ್ಳಲಿದೆ. ವಿಶೇಷವೆಂದರೆ ಬಳ್ಳಾರಿ ಹಾಗೂ ಹೊಸಪೇಟೆಯಲ್ಲೂ ಸಹ ಇಂದು ರಾತ್ರಿಯೇ ಚಿತ್ರ ಪ್ರದರ್ಶನಗೊಳ್ಳಲಿದೆ.
Discussion about this post