ಮಹಾರಾಜ ಗಂಜ್: ಅಕ್ರಮ ವಲಸಿಗರ ವಿಚಾರದಲ್ಲಿ ಅತ್ಯಂತ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೇಶದ ರಕ್ಷಣೆಗೆ ಮೊದಲ ಆದ್ಯತೆ ನೀಡಿರುವ ಮೋದಿ ನೇತೃತ್ವ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ವಲಸಿಗರಿಗೆ ಗೇಟ್ ಪಾಸ್ ನೀಡುವುದಾಗಿ ಹೇಳಿದೆ.
ಈ ಕುರಿತಂತೆ ಉತ್ತರ ಪ್ರದೇಶದ ಮಹಾರಾಜ ಗಂಜ್’ನಲ್ಲಿ ನಡೆದ ಕಾರ್ಯರ್ತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ, ಬಿಜೆಪಿ ಪಕ್ಷ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ಅಕ್ರಮ ವಲಸಿಗರೂ ತಮ್ಮ ತಮ್ಮ ತವರು ಸೇರಲಿದ್ದಾರೆ ಎಂದಿದ್ದಾರೆ.
ಅಕ್ರಮ ವಲಸಿಗರೇ ಎಸ್’ಪಿ, ಬಿಎಸ್”ಪಿ ಪಕ್ಷಗಳ ಮತ ಬ್ಯಾಂಕ್ ಆಗಿದ್ದು ಇದೇ ಕಾರಣಕ್ಕೆ ಈ ಪಕ್ಷಗಳು ಅವರ ರಕ್ಷಣೆಗೆ ಮುಂದಾಗುತ್ತಿವೆ. ಎನ್’ಆರ್’ಸಿಗೆ ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಕಿಡಿ ಕಾರಿದ್ದಾರೆ.
ಅಸ್ಸಾಂ’ನಲ್ಲಿ ನಡೆದ ರಾಷ್ಟಿಯ ನಾಗರಿಕ ನೋಂದಣಿ ಪ್ರಕ್ರಿಯೆಯಲ್ಲಿ ಸುಮಾರು 40 ಲಕ್ಷಕ್ಕೂ ಅಧಿಕ ಅಕ್ರಮ ವಲಸಿಗರು ಸಿಕ್ಕಿಬಿದ್ದಿದ್ದಾರೆ. ಈಗಾಗಲೇ ಅವರನ್ನು ದೇಶದಿಂದ ಕಳುಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಖಂಡಿತಾ ದೇಶದ ಉದ್ದಗಲಕ್ಕೂ ಇರುವ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕುತ್ತೇವೆ ಎಂದರು.

















