No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2019
in ಮಂಡ್ಯ
0
ಸಿಎಂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು
Share on FacebookShare on TwitterShare on WhatsApp

ಬೆಂಗಳೂರು: ಕಣಿವೆ ರಾಜ್ಯದ ಪುಲ್ವಾಮಾದಲ್ಲಿ ಗುರುವಾರ ಉಗ್ರರು ನಡೆಸಿದ ಭೀಕರ ಆತ್ಮಾಹುತಿ ದಾಳಿಯಲ್ಲಿ ವೀರಸ್ವರ್ಗ ಸೇರಿದ ಮಂಡ್ಯದ ಯೋಧ ಗುರು ಅವರ ಅಂತ್ಯಕ್ರಿಯೆ ಸಾವಿರಾರು ಮಂದಿಯ ಕಣ್ಣೀರಿನ ನಡುವೆ ಸಕಲ ಸರ್ಕಾರಿ ಹಾಗೂ ಸೇನಾ ಗೌರವದೊಂದಿಗೆ ನೆರವೇರಿದೆ.

ನಿಜಕ್ಕೂ ಈ ದೇಶದ ಯೋಧರೊಬ್ಬರಿಗೆ ಮರಣದ ವೇಳೆ ಸಿಗಬೇಕಾದ ಎಲ್ಲ ರೀತಿಯ ಗೌರವ ಹಾಗೂ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪೊಲೀಸ್ ಇಲಾಖೆಯನ್ನು ‘ಕಲ್ಪ ನ್ಯೂಸ್’ ನಮ್ಮ ರಾಜ್ಯದ ಪರವಾಗಿ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತದೆ.

ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣಕ್ಕೆ ನಿನ್ನೆ ಮಧ್ಯಾಹ್ನ 1 ಗಂಟೆ ವೇಳೆಗೆ ಗುರು ಅವರ ಪಾರ್ಥಿವ ಶರೀರವನ್ನು ತರಲಾಯಿತು.
ಆ ಸಂದರ್ಭ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಗೃಹ ಸಚಿವ ಎಂ.ಬಿ. ಪಾಟೀಲ್, ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಕೆ. ಪಾಟೀಲ್, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಅರವಿಂದ ಲಿಂಬಾವಳಿ, ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್‌ಭಾಸ್ಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಸೇರಿದಂತೆ ಸೇನಾಪಡೆಯ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಅಲ್ಲಿ ಹಾಜರಿದ್ದು ಗೌರವ ನಮನ ಸಲ್ಲಿಸಿದರು.

ವಿಮಾನ ನಿಲ್ದಾಣದಿಂದ ಪಾರ್ಥಿವ ಶರೀರವನ್ನು ಸೇನಾ ವಾಹನಕ್ಕೆ ತರುವಾಗ ಗೃಹ ಸಚಿವ ಎಂ.ಬಿ. ಪಾಟೀಲ್ ಅವರು ಪೊಲೀಸರೊಂದಿಗೆ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟಿದ್ದು ವಿಶೇಷ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಹೆಚ್. ಗುರು ಅವರ ಸ್ವಗ್ರಾಮ ಗುಡಿಗೆರೆಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಉಪ ಮುಖ್ಯಮಂತ್ರಿ @DrParameshwara, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಉಪಸ್ಥಿತರಿದ್ದರು. #PulwamaAttack pic.twitter.com/ErkZ81NiVw

— CM of Karnataka (@CMofKarnataka) February 16, 2019

ಅತ್ಯಂತ ಪ್ರಮುಖವಾಗಿ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಮಂಡ್ಯದ ಗುಡಿಗೆರೆಯ ವರೆಗೂ ಪಾರ್ಥಿವ ಶರೀರವನ್ನು ರಸ್ತೆ ಮಾರ್ಗವಾಗಿ ತರಲಾಯಿತು. ಅಂತಿಮ ಯಾತ್ರೆ ಸಾಗುವ ಮಾರ್ಗದ ಉದ್ದಕ್ಕೂ ಎಲ್ಲೂ ಸಂಚಾರ ದಟ್ಟಣ ಉಂಟಾಗಬಾರದು ಎಂಬ ಕಾರಣಕ್ಕಾಗಿ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಗುಡಿಗೆರೆ ವರೆಗೂ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ನಗರ ಪ್ರದೇಶದ ಮಾರ್ಗದುದ್ದಕ್ಕೂ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಹೀಗಾಗಿ, ಗುರು ಅವರ ಅಂತಿಮ ಯಾತ್ರೆಯಲ್ಲಿ ಯಾವುದೇ ರೀತಿಯ ತೊಂದರೆಗಳಾಗಲಿಲ್ಲ.

ಮಾರ್ಗದುದ್ದಕ್ಕೂ ದೇಶಪ್ರೇಮಿಗಳು, ಅಭಿಮಾನಿಗಳು ಪಾರ್ಥಿವ ಶರೀರದ ವಾಹನವನ್ನು ಅಲ್ಲಲ್ಲೆ ತಡೆದು ಪುಷ್ಪ ನಮನ ಸಲ್ಲಿಸಿದ್ದು ಮಾತ್ರವಲ್ಲ, ಗುರು ಪರವಾಗಿ, ದೇಶದ ಪರವಾಗಿ ಘೋಷಣೆ ಕೂಗುತ್ತಿದ್ದರು.

ಹೆಲಿಕಾಪ್ಟರ್ ಮೂಲಕ ಪಾರ್ಥಿವ ಶರೀರವನ್ನು ಕೊಂಡೊಯ್ಯದೇ ರಸ್ತೆ ಮಾರ್ಗವಾಗಿ ಕೊಂಡೊಯ್ದಿದ್ದು, ಸಾವಿರಾರು ಮಂದಿಗೆ ಅಂತಿಮ ದರ್ಶನ ಪಡೆಯಲು ಸಹಕಾರಿಯಾಯಿತು.

ಇನ್ನು, ಗುಡಿಗೆರೆಯಲ್ಲೂ ಸಹ ಗುರು ಅವರ ಅಂತ್ಯಸಂಸ್ಥಾರದ ಸಿದ್ದತೆಯನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಅತ್ಯಂತ ಅಚ್ಚುಕಟ್ಟಾಗಿ ಮಾಡಿತ್ತು. ಸಾವಿರಾರು ಮಂದಿ ಸೇರಿದ್ದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿತ್ತು.

ಸಕಲ ಸೇನಾ ಗೌರವ ಹಾಗೂ ಸರ್ಕಾರಿ ಗೌರವಗಳೊಂದಿಗೆ ಈ ದೇಶದ ವೀರ ಯೋಧನೋರ್ವನಿಗೆ ನಾಡು ಕಣ್ಣೀರಿನ ವಿದಾಯವನ್ನು ಹೇಳಿದ್ದು, ಗುರು ಈಗ ತಾಯಿ ಭಾರತಿಯ ಮಡಿಲನ್ನು ಸೇರಿದ್ದಾರೆ.

ನಿಜಕ್ಕೂ ಈ ದೇಶದ ಯೋಧನೊಬ್ಬನಿಗೆ ವೀರಸ್ವರ್ಗ ಸೇರುವ ಕಾಲದಲ್ಲಿ ದೊರೆಯಬೇಕಾದ್ದ ಎಲ್ಲ ರೀತಿಯ ಗೌರವಗಳನ್ನು ಎಲ್ಲೂ ಲೋಪವಾಗದಂತೆ ವ್ಯವಸ್ಥೆ ಮಾಡಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಪೊಲೀಸ್ ಇಲಾಖೆ ಹಾಗೂ ಮಂಡ್ಯ ಜಿಲ್ಲಾಡಳಿತವನ್ನು ರಾಜ್ಯದ ಪರವಾಗಿ ಕಲ್ಪ ನ್ಯೂಸ್ ಮತ್ತೊಮ್ಮೆ ಅಭಿನಂದಿಸುತ್ತದೆ.

Tags: CM H D KumaraswamyGovernment Of KarnatakaKannada NewsKarnatakaKarnataka PoliceMandyamartyred GuruPulwama BlastPulwama terror attackಎಚ್.ಡಿ. ಕುಮಾರಸ್ವಾಮಿಕರ್ನಾಟಕ ಪೊಲೀಸ್ ಇಲಾಖೆಮಂಡ್ಯಯೋಧ ಗುರು
Share196Tweet123Send
Previous Post

ಪುಲ್ವಾಮಾ ಹುತಾತ್ಮರಿಗೆ ರಾಷ್ಟ್ರದಾದ್ಯಂತ ದುಃಖ ಹಾಗೂ ದೇಶಭಕ್ತಿಯ ವಿದಾಯ

Next Post

ಭೀಕರ ಘಟನೆ ಬಗ್ಗೆ 8 ತಿಂಗಳ ಹಿಂದೆಯೇ ಭವಿಷ್ಯ ನುಡಿದಿದ್ದ ಪ್ರಕಾಶ್ ಅಮ್ಮಣ್ಣಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭೀಕರ ಘಟನೆ ಬಗ್ಗೆ 8 ತಿಂಗಳ ಹಿಂದೆಯೇ ಭವಿಷ್ಯ ನುಡಿದಿದ್ದ ಪ್ರಕಾಶ್ ಅಮ್ಮಣ್ಣಾಯ

ಭೀಕರ ಘಟನೆ ಬಗ್ಗೆ 8 ತಿಂಗಳ ಹಿಂದೆಯೇ ಭವಿಷ್ಯ ನುಡಿದಿದ್ದ ಪ್ರಕಾಶ್ ಅಮ್ಮಣ್ಣಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL