ನವದೆಹಲಿ: ಮುಂದಿನ ನಾಲ್ಕು ವಾರದ ಒಳಗಾಗಿ 550 ಕೋಟಿ ರೂ.ಗಳನ್ನು ಪಾವತಿ ಮಾಡಿ. ಇಲ್ಲವೇ ಜೈಲಿಗೆ ಹೋಗಿ: ಇದು ರಿಲಾಯನ್ಸ್ ಸಂಸ್ಥೆಯ ಮುಖ್ಯಸ್ಥ ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ಇಂದು ಚಾಟಿ ಬೀಸಿದ ಪರಿ.
ಎರಿಕ್ಸನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಮುಖಭಂಗ ಅನುಭವಿಸಿರುವ ಅನಿಲ್ ಅಂಬಾನಿ, ಈಗ ನಾಲ್ಕು ವಾರದ ಒಳಗಾಗಿ 550 ಕೋಟಿ ರೂ. ಪಾವತಿ ಮಾಡಬೇಕಿದೆ ಅಥವಾ ಜೈಲು ಶಿಕ್ಷೆ ಅನುಭವಿಸಬೇಕಿದೆ.
ಎರಿಕ್ಸನ್ ಪ್ರಕರಣದಲ್ಲಿ ಅನಿಲ್ ಅಂಬಾನಿ ನ್ಯಾಯಾಂಗ ನಿಂದನೆ ಮಾಡಿರುವುದು ಸ್ಪಷ್ಟವಾಗಿದೆ. ಈ ಕೂಡಲೇ ಅವರು ಹಣ ಹಿಂದಿರುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
Discussion about this post