ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಅವಧಿಯ ಕೊನೆಯ ಸಚಿವ ಸಂಪುಟ ಸಭೆ ಇಂದು ನಡೆಯಲಿದ್ದು, ಭಾರೀ ಕುತೂಹಲ ಮೂಡಿಸಿದೆ.
ಪ್ರಧಾನಿಯವರು ಅಧಿಕೃತ ನಿವಾಸ ನಂ.7, ಲೋಕ್ ಕಲ್ಯಾಣ್ ಮಾರ್ಗ್’ನಲ್ಲಿ ಸಭೆಯ ನಡೆಯಲಿದ್ದು, ಹಿರಿಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.
ವಿಶ್ವವಿದ್ಯಾನಿಲಯಗಳಲ್ಲಿನ ಬೋಧನಾಭಿವೃದ್ಧಿಗಾಗಿ 200-ಪಾಯಿಂಟ್ ರೋಸ್ಟರ್ ವ್ಯವಸ್ಥೆ ಮೀಸಲಾತಿ ವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸುಗ್ರೀವಾಜ್ಞೆ ಹೊರಡಿಸುವ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಇನ್ನು, ಮುಂದುವರೆದ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಘೋಷಣೆ ಮಾಡಿರುವ ಶೇ.10ರಷ್ಟು ಮೀಸಲಾತಿಗಾಗಿ ಸುಮಾರು 4 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಡುವ ಕುರಿತಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆಯಿದೆ.
Discussion about this post