ನವದೆಹಲಿ: ರಫೇಲ್ ಯುದ್ಧ ವಿಮಾನ ಒಪ್ಪಂದ ವಿಚಾರದಲ್ಲಿನ ದಾಖಲೆಗಳು ಕಳೆದುಹೋದ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಸಹ ತನಿಖೆಗೆ ಒಳಪಡಿಸಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ರಫೆಲ್ ಒಪ್ಪಂದದ ದಾಖಲೆಗಳ ಕಳವಿನ ಬಗ್ಗೆ ಮಾಧ್ಯಮಗಳನ್ನು ತನಿಖೆ ಮಾಡುವುದಾಗಿ ಹೇಳುವ ಸರ್ಕಾರ 30 ಸಾವಿರ ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ಮಾಡುವುದಿಲ್ಲ. ಪ್ರಧಾನಿ ಮೋದಿ ಸಹಿತ ಈ ಒಪ್ಪಂದದ ಹಿಂದೆ ಕೇಳಿಬರುತ್ತಿರುವ ಪ್ರತಿಯೊಬ್ಬರನ್ನು ಕೂಡ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಧಾನಿಯವರು ಬೈಪಾಸ್ ಸರ್ಜರಿ ರೀತಿ ಯುದ್ಧ ವಿಮಾನ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದ್ದು ಉದ್ಯಮಿ ಅನಿಲ್ ಅಂಬಾನಿಯವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಭ್ರಷ್ಟಾಚಾರಕ್ಕೆ ಇಳಿದಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.
Discussion about this post