ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ಅತಿ ಶೀಘ್ರದಲ್ಲೇ ಕೇಂದ್ರ ಚುನಾವಣಾ ಆಯೋಗ ವೇಳಪಟ್ಟಿ ಪ್ರಕಟಿಸಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಹೈವೊಲ್ಟೇಜ್ ಚುನಾವಣೆ ಎಂದೇ ಪರಿಗಣಿತವಾಗಿರುವ ಈ ಬಾರಿಯ ಚುನಾವಣೆ ಸುಮಾರು 7 ರಿಂದ 8 ಹಂತಗಳಲ್ಲಿ ನಡೆಯಲಿದ್ದು, ಅತಿ ಶೀಘ್ರದಲ್ಲೇ ವೇಳಾಪಟ್ಟಿಯನ್ನು ಆಯೋಗ ಪ್ರಕಟಿಸಲಿದೆ.
ಈ ಬಾರಿಯ ಚುನಾವಣೆ ನಡೆಸಲು ಎಲ್ಲ ಪ್ರಕ್ರಿಯೆಗಳು ಅಂತಿಮ ಹಂತದಲ್ಲಿದ್ದು, ಪ್ರಸ್ತುತ ಸಾರಿಗೆ ಸಿದ್ದತೆಗಳು ಅಂತಿಮ ಹಂತದಲ್ಲಿದೆ.
ಪ್ರಸ್ತುತ ಲೋಕಸಭೆಯ ಅವಧಿ ಜೂನ್ 3ಕ್ಕೆ ಅಂತ್ಯಗೊಳ್ಳಲಿದ್ದು, ಅದರೊಳಗೆ ಚುನಾವಣೆಯ ನಡೆದು ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ.
ಈ ಹಿನ್ನೆಲೆಯಲ್ಲಿ ಈ ವಾರಾಂತ್ಯದಲ್ಲಿ ಅಥವಾ ಮುಂದಿನ ವಾರದ ಆರಂಭದಲ್ಲಿ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದುಬಂದಿದೆ.
Discussion about this post