ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಯಾಗುವ ಹಂತದಲ್ಲಿರುವ ಬೆನ್ನಲ್ಲೇ ಚುನಾವಣಾ ಆಯೋಗ ಒಂದೊಂದೇ ಬಿಗಿ ನಿಲುವುಗಳನ್ನು ತಳೆಯುತ್ತಿದೆ.
ಇದರ ಭಾಗವಾಗಿ ಚುನಾವಣಾ ಪ್ರಚಾರಕ್ಕೆ ಭಾರತೀಯ ಸೇನೆ ಹಾಗೂ ಸೈನಿಕರ ಭಾವಚಿತ್ರಗಳನ್ನು ಯಾವುದೇ ರಾಜಕೀಯ ಪಕ್ಷಗಳು ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
EC issues advisory to all national&state political parties of the country,asks them to 'desist from displaying photographs of Defence personnel or photographs of functions involving Defence personnel in advertisements,or otherwise as part of their election propaganda/campaigning' pic.twitter.com/jBFsSyZEZM
— ANI (@ANI) March 9, 2019
ಈ ಕುರಿತಂತೆ ಎಲ್ಲ ರಾಜ್ಯಗಳ ಆಯೋಗ ಹಾಗೂ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಆಯೋಗ, ಭದ್ರತಾ ಪಡೆಗಳು ರಾಜಕೀಯ ವ್ಯವಸ್ಥೆ, ಭದ್ರತೆಯ ರಕ್ಷಕರಾಗಿದ್ದು, ಆಧುನಿಕ ಪ್ರಜಾಪ್ರಭುತ್ವದಲ್ಲಿ ತಟಸ್ಥ ಪಾಲುದಾರರಾಗಿದ್ದಾರೆ. ಆದ್ದರಿಂದಾಗಿ ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಯಾವುದೇ ಕಾರಣಕ್ಕೂ ಪ್ರಚಾರದ ಸಂದರ್ಭದಲ್ಲಿ ಸೇನೆಯ ಹಾಗೂ ಸೈನಿಕರ ಚಿತ್ರಗಳನ್ನು ಬಳಸುವಂತಿಲ್ಲ ಎಂದು ಸೂಚಿಸಿದೆ.
ಅಲ್ಲದೇ, ಎಲ್ಲ ರಾಜಕೀಯ ಪಕ್ಷಗಳಿಗೂ ಪತ್ರ ಬರೆದಿರುವ ಆಯೋಗ ತಮ್ಮ ಅಭ್ಯರ್ಥಿಗಳಿಗೆ ಸಲಹೆ ಹಾಗೂ ಸೂಚನೆ ನೀಡುವಂತೆ ಆಯೋಗ ಆದೇಶಿಸಿದೆ.
Discussion about this post