No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೇಶದ ಆರ್ಥಿಕ ಸ್ಥಿತಿಯ ಸಮತೋಲನ ಕಾಯುವಲ್ಲಿ ಕೃಷಿ ಕ್ಷೇತ್ರ ಸಹಕಾರಿ

kalpa News by kalpa News
March 10, 2019
in Small Bytes, ಶಿವಮೊಗ್ಗ
0
ದೇಶದ ಆರ್ಥಿಕ ಸ್ಥಿತಿಯ ಸಮತೋಲನ ಕಾಯುವಲ್ಲಿ ಕೃಷಿ ಕ್ಷೇತ್ರ ಸಹಕಾರಿ
Share on FacebookShare on TwitterShare on WhatsApp

ಶಿವಮೊಗ್ಗ: ದೇಶದ ಆರ್ಥಿಕ ಸ್ಥಿತಿಯ ಸಮತೋಲನ ಕಾಯ್ದುಕೊಳ್ಳುವಲ್ಲಿ ಕೃಷಿಕ್ಷೇತ್ರ ಅತ್ಯಂತ ಸಹಕಾರಿಯಾಗಿದೆ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್‌ನ ಮಹಾನಿರ್ದೇಶಕ ಡಾ. ತ್ರಿಲೋಚನ ಮಹಾಪಾತ್ರ ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ವಿವಿಯ ಆವರಣದಲ್ಲಿ ಏರ್ಪಡಿಸಿದ್ದ 4ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಿದ್ದರು.

ಹಿಂದೊಂದು ಕಾಲದಲ್ಲಿ ಕೃಷಿ ಕ್ಷೇತ್ರ ಲಾಭದಾಯಕವಲ್ಲ. ಇದರಿಂದಾಗಿ ದೇಶದ ಭವಿಷ್ಯದ ದಿನಗಳು ಆತಂಕಕರವಾಗಿವೆ ಎಂಬ ಅಭಿಪ್ರಾಯ ಜನಜನಿತವಾಗಿತ್ತು. ಪ್ರಸ್ತುತ ಇತ್ತೀಚಿನ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಆಗಿರಬಹುದಾದ ಅಸಾಧಾರಣ ಸಾಧನೆಗಳಿಂದಾಗಿ ಈ ಸಂಶಯ ಇನ್ನಿಲ್ಲವಾಗಿದೆ. ಮಾತ್ರವಲ್ಲ ದೇಶದ ಆರ್ಥಿಕ ಸ್ಥಿತಿಗತಿಗಳ ಸಮತೋಲನಕ್ಕೆ ಸಹಕಾರಿಯಾಗಿದೆ ಎಂದರು.

ದೇಶ ಆಹಾರ ಭದ್ರತೆಯಲ್ಲಿ ಸ್ವಾಮ್ಯತೆ ಸಾಧಿಸಿದೆ ಎಂಬುದು ಸತ್ಯ. ದೇಶದ ರೈತರು ಬೆಳೆಯುವ ಬೆಳೆ ಬೆಳೆಯುತ್ತಿರುವ ದೇಶದ ಜನಸಂಖ್ಯೆಗೆ ಪೂರಕವಾಗಿರಬೇಕಲ್ಲದೇ ಪೌಷ್ಠಿಕಾಂಶಯುಕ್ತವಾಗಿರಬೇಕು ಎಂದ ಅವರು, ಇಲ್ಲಿ ಬೆಳೆಯುತ್ತಿರುವ ಅಕ್ಕಿ ಸುಮಾರು 40,000 ಕೋಟಿ ರೂ.ಗಳ, ಅದರಲ್ಲೂ ವಿಶೇಷವಾಗಿ ಬಾಸುಮತಿ ಅಕ್ಕಿ ಸುಮಾರು 15,000ಕೋಟಿ ರೂ.ಗಳ ಮೌಲ್ಯದ ರಫ್ತು ವಾರ್ಷಿಕವಾಗಿ ಮಾಡಲಾಗುತ್ತಿದೆ. ಇಲ್ಲಿ ಬೆಳೆಯುವ ಕಬ್ಬು/ಸಕ್ಕರೆ ವಿದೇಶಕ್ಕೆ ರಫ್ತಾಗುತ್ತಿದ್ದು ಸುಮಾರು 7,000ಕೋಟಿ ರೂ.ಗಳ ವಹಿವಾಟು ಹೊಂದಿದೆ ಎಂದರು.

ಕೃಷಿ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಆಗಿರುವ ಸಾಧನೆ ಅಗಾಧವಾದುದು. ಈ ಸಂಶೋಧನಾ ಚಟುವಟಿಕೆಗಳು ದೇಶದ ಆಹಾರ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ. ಕಾಲಕಾಲಕ್ಕೆ ಕೃಷಿ ಕ್ಷೇತ್ರದಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳುವುದರಿಂದ ದೇಶದ ಆರ್ಥಿಕ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ಕೈಗೊಳ್ಳಲಾಗುತ್ತಿರುವ ತಂತ್ರಜ್ಞಾನಾಧಾರಿತ ವಿಷಯಗಳ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕೆಂದವರು ನುಡಿದರು.
ಮುಂದಿನ ದಿನಗಳಲ್ಲಿ ಭವಿಷ್ಯದ ದಿನಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ನಿಶ್ಚಯಿಸಿರುವ ಇಂದಿನ ವಿದ್ಯಾರ್ಥಿಗಳಿಗೆ ಕೃಷಿ ಸಂಸ್ಕರಣಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಪದವೀಧರರೂ ಕೂಡ ಸರ್ಕಾರಿ ಉದ್ಯೋಗವನ್ನೇ ಅವಲಂಬಿಸದೇ ಹಲವರಿಗೆ ಉದ್ಯೋಗ ನೀಡುವ ಉದ್ಯೋಗದಾತರಾಗಿ ಪರಿವರ್ತನೆ ಹೊಂದಬೇಕು ಎಂದರು.

ಕೃಷಿ ಕ್ಷೇತ್ರದ ವಿಕಾಸಕ್ಕೆ ಸವಾಲಾಗಿ ಪರಿಣಮಿಸಬಹುದಾದ ತಾಪಮಾನ, ಹವಾಮಾನ ಬದಲಾವಣೆ, ನೀರಿನ ಲಭ್ಯತೆ, ಬರ ನಿರ್ವಹಣೆ ಮುಂತಾದ ವಿಷಯಗಳ ಕುರಿತು ಪರ್ಯಾಯವಾಗಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚಿಂತಿಸಬೇಕು. ಕಡಿಮೆ ನೀರು ಬಳಸಿ ಬೆಳೆಯುವ ಪೌಷ್ಠಿಕಾಂಶಯುಕ್ತ ಬೆಳೆಗಳ ಕಡೆಗೆ ಗಮನಹರಿಸಬೇಕಾದ ಅಗತ್ಯವಿದೆ ಎಂದರು.

ವಿಶ್ವವಿದ್ಯಾನಿಲಯಗಳ ವ್ಯಾಪ್ತಿಯಲ್ಲಿ ನಡೆಯುವ ಸಂಶೋಧನಾ ಚಟುವಟಿಕೆಗಳ ರೈತರ ಹೊಲಗಳವರೆಗೆ ವಿಸ್ತರಗೊಳ್ಳಬೇಕು. ಕೃಷಿ ಮತ್ತು ತೋಟಗಾರಿಕೆ ಲಾಭದಾಯಕ ಉದ್ಯಮವಾಗಬೇಕು. ಕೃಷಿಕರ ಆರ್ಥಿಕವಾಗಿ ಬಲಿಷ್ಠರಾಗಬೇಕು. ಕೃಷಿಯಲ್ಲಿನ ಲಾಭ ದ್ವಿಗುಣಗೊಳ್ಳಬೇಕು. ಇದರಿಂದಾಗಿ ವಿಮುಖರಾಗಿರುವ ಬಹುಸಂಖ್ಯಾತರು ಕೃಷಿಯತ್ತ ಮರಳಿ ಬರುವ ಸಾಧ್ಯತೆ ಇದೆ ಎಂದರು.

ರಾಜ್ಯ ಸರ್ಕಾರವು ಹೈನುಗಾರಿಕೆಗೆ ಉತ್ತೇಜನ ನೀಡಿದ್ದರಿಂದಾಗಿ ಹಾಗೂ ಅನುಷ್ಠಾನಗೊಳಿಸಿದ ಕಾರ್ಯಕ್ರಮಗಳಿಂದಾಗಿ ಹೈನು ಉತ್ಪಾದನೆಯಲ್ಲಿ ರಾಜ್ಯದ ಸಾಧನೆ ಅಸಾಧಾರಣವಾದುದಾಗಿದೆ ಅಂತೆಯೇ ಕಡಿಮೆ ನೀರು ಮತ್ತು ಎಲ್ಲಾ ಕಾಲಮಾನಗಳಲ್ಲಿ ಬೆಳೆಯಬಹುದಾದ ಪೌಷ್ಠಿಕಾಂಶಯುಕ್ತ ಸಿರಿಧಾನ್ಯಗಳ ಬೆಳೆಗೆ ಉತ್ತೇಜನ ನೀಡಬೇಕಾದ ಅಗತ್ಯವಿದೆ. ಇಂತಹ ಸಿರಿಧಾನ್ಯಗಳನ್ನು ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಗೆ ಅಳವಡಿಸಿಕೊಳ್ಳಬೇಕೆಂದ ಅವರು, ಕೃಷಿ ಬೆಳೆಗಳ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಗೆ, ಅವುಗಳ ಮಾರುಕಟ್ಟೆಗೆ, ಸಂಸ್ಕರಣೆಗೆ ಮುಂದಾಗುವಂತೆ ಅವರು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ.ನಾಯಕ್ ಅವರು ಎಲ್ಲರನ್ನೂ ಸ್ವಾಗತಿಸಿ ವಿವಿಯ ವರದಿ ವಾಚನ ಮಾಡಿದರು. ಈ ಸಂದರ್ಭದಲ್ಲಿ ವಿವಿಯ ಸಹಕುಲಾಧಿಪತಿ ಹಾಗೂ ರಾಜ್ಯ ಕೃಷಿ ಸಚಿವ ಶಿವಶಂಕರರೆಡ್ಡಿ, ಹಾಗೂ ವಿವಿಯ ವ್ಯವಸ್ಥಾಪನಾ ಮಂಡಳಿಯ ನಿರ್ದೇಶಕರು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿವಿಧ ನಿಕಾಯಗಳ ಪ್ರತಿಭಾವಂತ 22 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಅವರಲ್ಲಿ ಮುಖ್ಯವಾಗಿ ವಿದ್ಯಾಶ್ರೀ ಎಸ್.-04, ಆಶ್ರಿತಾ ಕೆ.ಎನ್., ಮೇಘನಾ ಎನ್., ಚಂದನ್ ಜೆ.ಎಸ್., ರಾಣಿ ಜಯದುರ್ಗ ನಾಯಕ್, ದಯಾನಂದ ಪಾಟೀಲ್ ಇವರು ತಲಾ 02ಚಿನ್ನದ ಪದಕ ಪಡೆದರು.

(ವರದಿ: ಡಾ.ಸುಧೀಂದ್ರ)

Tags: agriculture university shimogaKannada NewsMalnad NewsShivamoggaಕೃಷಿ ಕ್ಷೇತ್ರಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ತಾಪಂ ಅಧ್ಯಕ್ಷರ, ಶಾಸಕರ ಆಪ್ತರ ಊರಿನ ಶಾಲೆಯಲ್ಲಿ ನೀರಿನ ಬರ

Next Post

ಶಿವಮೊಗ್ಗ-ಮೂಢನಂಬಿಕೆಗಳಿಗೆ ಸ್ತ್ರೀಯರು ಬಲಿಯಾಗಬಾರದು: ಡಾ. ಸಾಯಿಕೋಮಲ್ ಕರೆ

kalpa News

kalpa News

Next Post
ಶಿವಮೊಗ್ಗ-ಮೂಢನಂಬಿಕೆಗಳಿಗೆ ಸ್ತ್ರೀಯರು ಬಲಿಯಾಗಬಾರದು: ಡಾ. ಸಾಯಿಕೋಮಲ್ ಕರೆ

ಶಿವಮೊಗ್ಗ-ಮೂಢನಂಬಿಕೆಗಳಿಗೆ ಸ್ತ್ರೀಯರು ಬಲಿಯಾಗಬಾರದು: ಡಾ. ಸಾಯಿಕೋಮಲ್ ಕರೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL