ಸಿದ್ದಾಪುರ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮಗ್ರ ಅಭಿವೃದ್ಧಿ ಮುಂದುವರೆಯಲು ಬಿಜೆಪಿಯನ್ನು ಬೆಂಬಲಿಸಿ ಎಂದು ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರ ನಾಗೂರು ಬೈಂದೂರು ವಂಡ್ಸೆಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಬುಧವಾರ ನಡೆದ ಅವರು ಮಾತನಾಡಿದರು.

ಈ ಚುನಾವಣೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಮತದಾನವಾಗುವಂತೆ ಕಾರ್ಯಕರ್ತರು ಶ್ರಮವಹಿಸಬೇಕಿದ್ದು, ಪ್ರತಿಯೊಬ್ಬರೂ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕುಂದಾಪುರ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಸಹಿತ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.















