ಶಿವಮೊಗ್ಗ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಜಿಲ್ಲಾ ಯುವ ಕಾಂಗ್ರೆಸ್ ಭರವಸೆ ವ್ಯಕ್ತಪಡಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಪ್ರವೀಣ್ ಕುಮಾರ್, ಕಳೆದ ಐದು ವರ್ಷಗಳ ಹಿಂದೆ ಸುಳ್ಳು ಭರವಸೆಗಳನ್ನು ನೀಡಿ ಯುವಕ ವಿರೋಧಿ, ರೈತ ವಿರೋಧಿ, ಜನ ವಿರೋಧಿಯಾದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಈ ಬಾರಿ ಜನ ತಿರಸ್ಕಾರ ಮಾಡುತ್ತಾರೆ. ಈಗಾಗಲೇ ಜಿಲ್ಲಾ ವ್ಯಾಪಿ ಯುವ ಕಾಂಗ್ರೆಸ್ ಬೂತ್, ವಾರ್ಡ್ ಹಾಗೂ ಪಂಚಾಯಿತಿ ಮಟ್ಟದಲ್ಲಿ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳನ್ನು ಸಾರ್ವಜನಿಕರಿಗೆ ತಿಳಿಸುತ್ತಾ ಚುನಾವಣೆಗೆ ಸನ್ನದ್ದವಾಗಿದೆ ಈ ಬಾರಿ ಶಿವಮೊಗ್ಗ ಲೋಕ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪನವರು ಅವರ ಗೆಲುವು ನಿಶ್ಚಿತ ಎಂದರು.
ಈ ವೇಳೆ ಮಾತನಾಡಿದ ಯುವ ಕಾಂಗ್ರೆಸ್ ಉಸ್ತುವಾರಿಗಳು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರವಿಕುಮಾರ್ ಅವರು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಅತಿ ಹೆಚ್ಚು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದು ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದರು.
ಮತ್ತೋರ್ವ ಉಸ್ತುವಾರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಂಗನಾಥ್ ಅವರು ಮಾತನಾಡಿ ’ಯುವಕರ ಶಕ್ತಿ ದೇಶದ ಶಕ್ತಿ’ ಇಂತಹ ಯುವಕರಿಗೆ ಉದ್ಯೋಗ ಸೃಷ್ಟಿಸುವ ಸುಳ್ಳು ಬರವಸೆ ನೀಡಿ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ ಯುವಕರ ವಿರೋಧಿಯಾಗಿದೆ ಈ ಬಾರಿ ಅತಿಹೆಚ್ಚು ಯುವ ಮತದಾರರಿದ್ದು, ಯುವಕ ವಿರೋಧಿ ಬಿಜೆಪಿ ಸರ್ಕಾರವನ್ನು ತಿರಸ್ಕರಿಸಿ, ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್ , ರಾಜ್ಯ ಕಾರ್ಯದರ್ಶಿಗಳಾದ ಆರ್. ಕಿರಣ್ ಟಿ.ವಿ. ರಂಜಿತ್ ಗ್ರಾಮಾಂತರ ಅಧ್ಯಕ್ಷ ಇ.ಟಿ. ನಿತಿನ್ ರಾವ್ , ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಡಿ.ಆರ್. ಗಿರೀಶ್ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್ ರಾಹುಲ್ ಹಾಗೂ ಮಂಜು ಇದ್ದರು.

















