ಶಿವಮೊಗ್ಗ: ಚುನಾವಣಾ ಆಯೋಗ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಪ್ರಜಾಪ್ರಭುತ್ವದ ಹಬ್ಬವೆಂದೆ ಬಣ್ಣಿಸಲಾಗುತ್ತಿರುವ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಮತದಾನ ಪ್ರಕ್ರಿಯೆಯಲ್ಲಿ ಪ್ರಥಮವಾಗಿಸಲು ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರು ಮಾರ್ಚ್ 21ರ ಇಂದು ಸಂಜೆ 6.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶಿವಮೊಗ್ಗದ ನಾಗರಿಕರೊಂದಿಗೆ ಚರ್ಚೆ-ಸಂವಾದ ನಡೆಸಲಿದ್ದಾರೆ.
ಈ ಸಂವಾದ ಜಿಲ್ಲೆಯ ಪ್ರಜ್ಞಾವಂತ ನಾಗರಿಕರು, ಚಿಂತಕರು ಈ ಚರ್ಚೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಚುನಾವಣಾ ಶಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ತಮ್ಮ ಹೆಸರನ್ನು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಅಥವಾ ಕಾರ್ಯಕ್ರಮ ಸಂಯೋಜಕರಲ್ಲಿ(ಮೊ.99453 87650) ನೋಂದಾಯಿಸಿಕೊಳ್ಳಬಹುದಾಗಿದೆ.
Discussion about this post