ಬೆಂಗಳೂರು: ಬಿಜೆಪಿ ಹೈಕಮಾಂಡ್’ಗೆ 1800 ರೂ. ಕಪ್ಪ ಕಾಣಿಕೆಯನ್ನು ನೀಡಿದ್ದೇನೆ ಎಂದು ಕಾಂಗ್ರೆಸ್ ಮಾಡಿರುವ ಆರೋಪವನ್ನು ನಿರಾಕರಿಸಿರುವ ಬಿ.ಎಸ್. ಯಡಿಯೂರಪ್ಪ, ಇದೊಂದು ಸುಳ್ಳಿನ ಕಂತೆಯಾಗಿದ್ದು, ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಈ ವಿಷಯ ಮುಗಿದ ಅಧ್ಯಾಯವಾಗಿದೆ. ರಾಜಕೀಯ ಲಾಭ ಪಡೆಯುವ ಉದ್ದೇಶ ಇದರ ಹಿಂದಿದೆ. ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಅಪಪ್ರಚಾರ ಮತ್ತು ನಕಲಿ ಸುದ್ದಿಗಳನ್ನು ಹರಡುವುದರಲ್ಲಿ ನಿರತರಾಗಿದ್ದಾರೆ. ಈಗ ಪ್ರಸ್ತಾಪಿಸಿರುವ ಭ್ರಷ್ಟಾಚಾರ ಆರೋಪದ ಕುರಿತು ಈ ಹಿಂದೆಯೇ ವಿಚಾರಣೆ ನಡೆದು ಇದಕ್ಕೆ ಸಂಬಂಧಿಸಿದ ದಾಖಲೆಗಳೆಲ್ಲವೂ ನಕಲಿ ಎನ್ನುವುದು ಸಾಬೀತಾಗಿದೆ. ಈ ವಿಚಾರದಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದಿದ್ದಾರೆ.
Absolute nonsense, disgusting & desperate efforts by @INCIndia to release such fake diary, prove it at the earliest or face defamation case. pic.twitter.com/3sMkYTd3Kb
— Chowkidar B.S. Yeddyurappa (@BSYBJP) March 22, 2019
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್’ಗೆ ಸೋಲಿನ ಭಯ ಕಾಡಿದೆ. ಸೋಲು ತಮಗೆ ಕಟ್ಟಿಟ್ಟ ಬುತ್ತಿ ಎಂದು ಗೊತ್ತಿದೆ. ಹೀಗಾಗಿ, ಇಂತಹ ಕೃತ್ಯಗಳನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
Discussion about this post