ಹೊಸನಗರ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಹೊಸನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳ ಮುಖಂಡರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಹೊಸನಗರ ಪಟ್ಟಣದ ಬ್ರಾಹ್ಮಣ ಸಮುದಾಯದ ಭವನಲ್ಲಿ ನಡೆದ ಕೈ-ದಳ ಕಾರ್ಯಕರ್ತ ಸಭೆಯಲ್ಲಿ ಭಾಗಿಯಾದ ಮಧು, ಆನಂತರ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು.

ಕಾರ್ಯರ್ತರ ಜಂಟಿ ಸಭೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಸೇರಿದಂತೆ ಹಲವು ಚುನಾಯಿತ ಪ್ರತಿನಿಧಿಗಳು ಭಾಗಿಯಾಗಿದ್ದರು.
ಇತ್ತೀಚೆಗೆ ನಿಧನ ಹೊಂದಿದ ಸಾಗರ ತಾಲೂಕಿನ ಹುಚ್ಚಪ್ಪ ಕುಗ್ವೆ ಅವರ ಮನೆಗೆ ಮಧು ಬಂಗಾರಪ್ಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರೊಂದಿಗೆ ಭೇಟಿ ಮಾಡಿ, ಅವರ ತಾಯಿಗೆ ಸಾಂತ್ವನ ಹೇಳಿದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲೆಂದು ಪ್ರಾರ್ಥಿಸಿದರು.

ಇಂದು ಚುನಾವಣಾ ಪ್ರಚಾರಕ್ಕೆ ತೆರಳಿದಾಗ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಆದ ಅನಿತಾ ಕುಮಾರಿಯವರು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಂ. ಶ್ರೀಕಾಂತ್ ಅವರಿಗೆ ಸನ್ಮಾನಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.
















